ಬೆಂಗಳೂರು : ಕಳಸಾ ಬಂಡೂರಿ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕರ್ನಾಟಕ ಗಡಿ ಹೋರಾಟ ಸಮಿತಿ ಕರ್ನಾಟಕ ಬಂದ್ ಗೆ ಕರೆ ನೀಡಿದೆ.
ಉತ್ತರ ಕರ್ನಾಟಕ ಭಾಗದ ಜನರು ಹನಿ ನೀರಿಗಾಗಿ ಪರದಾಡುತ್ತಿದ್ದಾರೆ. ಕಳಸಾ ಬಂಡೂರಿ ಯೋಜನೆ ಜಾರಿಗೊಳಿಸುವ ವಿಚಾರದಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ. ನೀರಿನ ವಿಚಾರದಲ್ಲಿ ರಾಜ್ಯ ಬಿಜೆಪಿ ಸಂಸದರು ಸ್ವಾರ್ಥ ರಾಜಕಾರಣ ಮಾಡುತ್ತಿದ್ದಾರೆ ಎಂದು ಗಡಿ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಪ್ರೋ ಬಿಕೆರಾ ರಾವ್ ಬೈಂದೂರ್ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಗಮನ ಸೆಳೆಯಲು ಹಾಗೂ ಜನಜಾಗೃತಿ ಉದ್ದೇಶದಿಂದ ಏ.೧೮ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಹಲವು ಸಂಘಟನೆಗಳು ಬೆಂಬಲ ಸೂಚಿಸಿವೆ. ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಕಾರ್ಯಕರ್ತರು ಬಂದ್ ಆಚರಿಸಲಿದ್ದಾರೆ ಎಂದು ತಿಳಿಸಿದ್ದಾರೆ.