ಜಮ್ಮು : ಜಮ್ಮು-ಕಾಶ್ಮೀರದ ರಿಯಾಸಿ ಜಿಲ್ಲೆಯ ಕತ್ರಾದಲ್ಲಿ ನಿರ್ಮಿಸಿರುವ ಶ್ರೀ ಮಾತಾ ವೈಷ್ಣೋದೇವಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದಾರೆ.
ವೈಷ್ಣೋದೇವಿ ದೇವಾಲಯವು ಸುಮಾರು 300 ಕೋಟಿ ರೂ. ವೆಚ್ಚದಲ್ಲಿ 230 ಹಾಸಿಗೆ ಸಾಮರ್ಥ್ಯದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ನಿರ್ಮಿಸಿದೆ.
ಉದ್ಘಾಟನಾ ಸಮಾರಂಭದಲ್ಲಿ ಜಮ್ಮು-ಕಾಶ್ಮೀರದ ರಾಜ್ಯಪಾಲ ಎನ್.ಎನ್.ವೋಹ್ರಾ, ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ, ಉಪ ಮುಖ್ಯಮಂತ್ರಿ ನಿರ್ಮಲ್ ಸಿಂಗ್, ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಪಾಲ್ಗೊಂಡಿದ್ದರು.
ಪ್ರಧಾನಿ ಮೋದಿ ಅಧಿಕಾರ ವಹಿಸಿಕೊಂಡ ನಂತರ ಕತ್ರಾಗೆ ಇದು ಅವರ ಮೂರನೇ ಭೇಟಿಯಾಗಿದೆ. ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ಜಮ್ಮುವಿನಲ್ಲಿ ಎಸ್ ಪಿಜಿ ಕಮಾಂಡೋಗಳನ್ನು ನಿಯೋಜಿಸಲಾಗಿದೆ.