Untitled Document
Sign Up | Login    
Dynamic website and Portals
  
April 21, 2016

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಲಾಬಿ: ಸೋನಿಯಾ ಗಾಂಧಿ ಭೇಟಿಯಾದ ಕೆ.ಹೆಚ್.ಮುನಿಯಪ್ಪ

ನವದೆಹಲಿ : ಕೆಪಿಸಿಸಿ (ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ) ಅಧ್ಯಕ್ಷ ಸ್ಥಾನಕ್ಕಾಗಿ ಲಾಬಿ ನಡೆಯುತ್ತಿದ್ದು, ಸಂಸದ ಹಾಗೂ ಮಾಜಿ ಸಚಿವ ಕೆ.ಹೆಚ್‌.ಮುನಿಯಪ್ಪ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ, ಕೆಪಿಸಿಸಿ ಅಧ್ಯಕ್ಷ ಸ್ಥಾನ ತಮಗೇ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.

ದೆಹಲಿಯ ಜನಪಥ್‌ ನಲ್ಲಿರುವ ಸೋನಿಯಾ ಗಾಂಧಿ ನಿವಾಸಕ್ಕೆ ಭೇಟಿ ನೀಡಿದ ಮುನಿಯಪ್ಪ, ಕಾಂಗ್ರೆಸ್‌ ಪಕ್ಷದ ಮೇಲಿರುವ ತಮ್ಮ ನಿಷ್ಠೆಯ ಕುರಿತಾಗಿ ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.
ಪಕ್ಷದಿಂದ ಏಳು ಬಾರಿ ಸಂಸದನಾಗಿ ಆಯ್ಕೆಯಾಗಿರುವುದು ಮಾತ್ರವಲ್ಲದೆ ಕೇಂದ್ರದಲ್ಲಿ ಪಕ್ಷ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ತನಗೆ ವಹಿಸಿದ್ದ ಮಂತ್ರಿ ಹುದ್ದೆಯ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿರುವ ಕುರಿತಾಗಿ ಮುನಿಯಪ್ಪ ಅವರು ಸೋನಿಯಾ ಗಾಂಧಿ ಅವರಿಗೆ ಮನದಟ್ಟು ಮಾಡಿಕೊಟ್ಟಿದ್ದು, ಈ ನಿಟ್ಟಿನಲ್ಲಿ ಈ ಬಾರಿ ರಾಜ್ಯ ಕಾಂಗ್ರೆಸ್‌ ಸಾರಥ್ಯವನ್ನು ತಮಗೆ ವಹಿಸಿಕೊಡುವಂತೆ ಕೋರಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಸೋನಿಯಾ ಗಾಂಧಿ ಅವರನ್ನು ಭೇಟಿಯಾದ ಬಳಿಕ ಮಾತನಾಡಿರುವ ಮುನಿಯಪ್ಪ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದಂತೆ ತಮ್ಮ ಮನವಿಗೆ ಸೋನಿಯಾ ಗಾಂಧಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಎಲ್ಲರೊಡನೆ ಚರ್ಚಿಸಿ ಒಂದು ನಿರ್ಧಾರಕ್ಕೆ ಬರುವುದಾಗಿ ತಿಳಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited