Untitled Document
Sign Up | Login    
Dynamic website and Portals
  
April 23, 2016

ವೈಭವದಿಂದ ನಡೆದ ಬೆಂಗಳೂರು ಕರಗ ಮಹೋತ್ಸವ

BW News Bureau : ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ ವೈಭವದಿಂದ ಜರುಗಿತು. ಹುಣ್ಣಿಮೆಯ ಬೆಳದಿಂಗಳಲ್ಲಿ, ಬೆಂಗಳೂರು ಮಾತ್ರವಲ್ಲದೇ ರಾಜ್ಯದ ಮೂಲೆ ಮೂಲೆಗಳಿಂದ ಬಂದಿದ್ದ ಭಕ್ತ ಜನ ಸಮೂಹದ ಗೋವಿಂದ..ಗೋವಿಂದ..ಎಂಬ ನಾಮಸ್ಮರಣೆಯೊಂದಿಗೆ ಧನ್ಯತಾ ಭಾವ ಮೆರೆದರು.

ಧರ್ಮರಾಯಸ್ವಾಮಿ ದೇವಾಲಯದಿಂದ ಮಲ್ಲಿಗೆ ಹೂವಿಂದ ಮೈದಳೆದ ಕರಗ ಮಹೋತ್ಸವ.. ಮಧ್ಯರಾತ್ರಿ 1.45ರ ಸುಮಾರಿಗೆ ಅರ್ಚಕ ಲಕ್ಷ್ಮೀಶ ಕರಗ ಹೊತ್ತು ಧರ್ಮರಾಯಸ್ವಾಮಿ ದೇವಾಲಯದ ಗರ್ಭಗುಡಿಯಿಂದ ಹೊರಕ್ಕೆ ಬರುತ್ತಿದ್ದಂತೆ ತಮಟೆ ವಾದನ, ಮಂಗಳ ವಾದ್ಯಗಳ ಮೊಳಗುವಿಕೆ.. ಭಕ್ತಿಯ ಪರವಶತೆ.. ಹೀಗೆ ಬೆಂಗಳೂರಿನ ಹೂವಿನ ಕರಗ ಮಹೋತ್ಸವಕ್ಕೆ ಲಕ್ಷಾಂತರ ಮಂದಿ ಸಾಕ್ಷಿಯಾದರು.

ನಗರದ ಪ್ರಮುಖ ಸ್ಥಳಗಳಾದ ಅಕ್ಕಿಪೇಟೆ, ಅರಳೇಪೇಟೆ, ಕುಂಬಾರ ಪೇಟೆ, ಗೊಲ್ಲರ ಪೇಟೆ, ತಿಗಳರಪೇಟೆ ಸೇರಿದಂತೆ ನಗರದ ನಾಲ್ಕು ದಿಕ್ಕುಗಳಲ್ಲಿ ಕರಗ ಸಂಚರಿಸಿತು. ಅನಂತರ ಹಾಲುಬೀದಿ, ಕಬ್ಬನ್‌ ಪಾರ್ಕ್‌, ಸುಣಕಲ್‌ ಪೇಟೆ ಮೂಲಕ ಹಾದು ಬಂದ ಕರಗ ಇಡೀ ರಾತ್ರಿ ಸುಮಾರು 86 ದೇವಸ್ಥಾನಗಳನ್ನು ಪ್ರದಕ್ಷಿಣೆ ಹಾಕಿತು.

ಬಳಿಕ ಕುಲಪುರೋಹಿತರ ಮನೆಯಲ್ಲಿ ಪೂಜೆ ಸ್ವೀಕರಿಸಿ ಸೂರ್ಯೋದಯದ ವೇಳೆಗೆ ಧರ್ಮರಾಯಸ್ವಾಮಿ ದೇವಸ್ಥಾನ ಸೇರಿತು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Religion & Spirituality

ಶಬರಿಮಲೈ: ಮಹಿಳೆಯರ ದೇಗುಲ ಪ್ರವೇಶ ಕುರಿತ ಅರ್ಜಿ ಸಾಂವಿಧಾನಿಕ ಪೀಠಕ್ಕೆ
  • ಶಬರಿಮಲೈ: ಮಹಿಳೆಯರ ದೇಗುಲ ಪ್ರವೇಶ ಕುರಿತ ಅರ್ಜಿ ಸಾಂವಿಧಾನಿಕ ಪೀಠಕ್ಕೆ
  • ಶಬರಿಮಲೈ ದೇಗುಲಕ್ಕೆ ಮಹಿಳೆಯ ಪ್ರವೇಶ ಕುರಿತಾದ ಆರ್ಜಿಯನ್ನು ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿದೆ.
  • ವೈಭವದ ದಸರಾ ಮಹೋತ್ಸವ: ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾದ ಚಾಮುಂಡೇಶ್ವರಿ
  • ನಂದಿಧ್ವಜಕ್ಕೆ ಸಿಎಂ ಪೂಜೆ: ಜಂಬೂಸವಾರಿಗೆ ಚಾಲನೆ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited