Untitled Document
Sign Up | Login    
Dynamic website and Portals
  
April 24, 2016

ಸಂಸತ್ ಅಧಿವೇಶನ ಹಿನ್ನಲೆ: ಸರ್ವಪಕ್ಷಗಳ ಸಭೆ

ನವದೆಹಲಿ : ಏ.೨೫ರಿಂದ ಪ್ರಾರಂಭವಾಗುತ್ತಿರುವ ಸಂಸತ್ ಅಧಿವೇಶನದ ಹಿನ್ನೆಲೆಯಲ್ಲಿ ಲೋಕಸಭೆ ಸ್ಪೀಕರ್ ಸುಮಿತ್ರಾ ಮಹಾಜನ್ ಸರ್ವಪಕ್ಷಗಳ ಸಭೆ ಕರೆದಿದ್ದು, ಸುಗಮ ಕಲಾಪಕ್ಕೆ ಅನುವು ಮಾಡಿಕೊಡುವಂತೆ ಮನವಿ ಮಾಡಲಿದ್ದಾರೆ.

ಉತ್ತರಾಖಂಡ್ ದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಿರುವ ಕೇಂದ್ರ ಸರ್ಕಾರದ ಕ್ರಮದ ವಿರುದ್ಧ ವಿರೋಧ ಪಕ್ಷಗಳು ವಾಗ್ದಾಳಿ ನಡೆಸಲು ಸಿದ್ಧತೆ ನಡೆಸಿವೆ. ಹಾಗಾಗಿ ಸೋಮವಾರದಿಂದ ಆರಂಭವಾಗಲಿರುವ ಸಂಸತ್ ಕಲಾಪದಲ್ಲಿ ಈ ವಿಷಯ ಚರ್ಚೆಗೆ ಬರಲಿದೆ.

ಅಲ್ಲದೇ ಜಿ.ಎಸ್.​ಟಿ ಮಸೂದೆಗೆ ಅಧಿವೇಶನದಲ್ಲಿ ಅಂಗೀಕರ ದೊರೆಯಬೇಕಿದ್ದು, ಕೇಂದ್ರ ಸರ್ಕಾರ ಜಿ.ಎಸ್.​ಟಿ ಮಸೂದೆ ಅಂಗೀಕರಿಸಲು ಸರ್ವ ಪ್ರಯತ್ನ ನಡೆಸಲಿದೆ.

ಉತ್ತರಾಖಂಡ್ ರಾಜಕೀಯ ಪರಿಸ್ಥಿತಿ ಕುರಿತು ಚರ್ಚೆ ನಡೆಸಲು ವಿರೋಧ ಪಕ್ಷಗಳು ಈಗಾಗಲೇ ರಾಜ್ಯ ಸಬೆಯಲ್ಲಿ ನೋಟಿಸ್ ನೀಡಿವೆ. ಜತೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿವಿಧ ವಿರೋಧ ಪಕ್ಷಗಳ ನಾಯಕರನ್ನು ಭೇಟಿ ಮಾಡಿ ಉತ್ತರಾಖಂಡ್ ರಾಜಕೀಯ ಸ್ಥಿತಿ ಕುರಿತು ಚರ್ಚೆ ನಡೆಸಲು ಸಿದ್ಧತೆ ನಡೆಸಿದ್ದಾರೆ. ಒಟ್ಟಿನಲ್ಲಿ ಈಬಾರಿಯ ಸಂಸತ್ ಅಧಿವೇಶನ ಆಡಳಿತ ಮತ್ತು ವಿಪಕ್ಷಗಳ ನಡುವೆ ಭಾರೀ ವಾಕ್ಸಮರಕ್ಕೆ ವೇದಿಕೆಯಾಗಲಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited