ನವದೆಹಲಿ : ಪ್ರಧಾನಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ 5 ಕೋಟಿ ಬಿಪಿಎಲ್ ಕುಟುಂಬಗಳಿಗೆ ಉಚಿತ ಅಡುಗೆ ಅನಿಲ ಸಂಪರ್ಕ ಕಲ್ಪಿಸಲು ಕೇಂದ್ರ ಸರ್ಕಾರ ಮುಂದಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಕರೆಗೆ ದೇಶದಲ್ಲಿ 1.13 ಕೋಟಿ ಗ್ರಾಹಕರು ಅಡುಗೆ ಅನಿಲ ಸಬ್ಸಿಡಿ ತ್ಯಜಿಸಿದ್ದರಿದ್ದಾರೆ. ಇದರಿಂದ ಉಳಿತಾಯವಾಗಿರುವ ಹಣ ಬಳಸಿಕೊಂಡು ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಉಜ್ವಲ ಯೋಜನೆ ಹೆಸರಿನಲ್ಲಿ 5 ಕೋಟಿ ಬಡ (ಬಿಪಿಎಲ್) ಕುಟುಂಬಗಳಿಗೆ ಉಚಿತ ಅಡುಗೆ ಅನಿಲ ಸಂಪರ್ಕ ನೀಡಲು ನಿರ್ಧರಿಸಿದೆ.
ಈ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಮೇ 1ರಂದು ಉತ್ತರಪ್ರದೇಶದ ಬಲಿಯಾದಲ್ಲಿ ಚಾಲನೆ ನೀಡಲಿದ್ದಾರೆ. 8 ಸಾವಿರ ಕೋಟಿ ರೂ. ಮೊತ್ತದ ಯೋಜನೆ ಇದಾಗಿದೆ ಎಂದು ಸರ್ಕಾರ ತಿಳಿಸಿದೆ.