Untitled Document
Sign Up | Login    
Dynamic website and Portals
  
April 24, 2016

ಅರುಣಾಚಲ ಪ್ರದೇಶದಲ್ಲಿ ಭೂಕುಸಿತ: ಪ್ರಧಾನಿ ಮೋದಿ ಪರಿಹಾರ ಘೋಷಣೆ

ನವದೆಹಲಿ : ಅರುಣಾಚಲ ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವನ್ನಪ್ಪಿದ್ದವರ ಕುಟುಂಬಸ್ಥರಿಗೆ ಪ್ರಧಾನಿ ನರೇಂದ್ರ ಮೋದಿ ತಲಾ 2 ಲಕ್ಷ ರೂ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

ಅರುಣಾಚಲ ಪ್ರದೇಶದಲ್ಲಿ ಹಲವು ದಿನಗಳಿಂದ ಎಡೆಬಿಡದ ಸುರಿದ ಭಾರಿ ಮಳೆಗೆ ಭೂಕುಸಿತ ಸಂಭವಿಸಿದ ಹಿನ್ನಲೆಯಲ್ಲಿ 17ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರು. ತವಾಂಗ್‌ ಜಿಲ್ಲೆ ಪಮ್ಲಾ ಹಳ್ಳಿಯಲ್ಲಿ ಕಟ್ಟಡ ನಿರ್ಮಾಣವೊಂದರಲ್ಲಿ ಕಾರ್ಮಿಕರು ತೊಡಗಿಕೊಂಡಿದ್ದ ವೇಳೆ ಭೂಕುಸಿತ ಸಂಭವಿಸಿತ್ತು.

ಘಟನೆ ಸಂಬಂಧ ಪ್ರಧಾನಿ ನರೇಂದ್ರ ಮೋದಿಯವರು ಸಂತಾಪ ಸೂಚಿಸಿದ್ದರು. ಇದೀಗ ಮೃತರ ಕುಟುಂಬಕ್ಕೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಪರಿಹಾರ ಘೋಷಿಸಿದ್ದು, ಮೃತ ಕುಟುಂಬಕ್ಕೆ ತಲಾ 2 ಲಕ್ಷ ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ನೀಡುವುದಾಗಿ ಘೋಷಣೆ ಮಾಡಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited