Untitled Document
Sign Up | Login    
Dynamic website and Portals
  
April 25, 2016

ಭಾರತ-ಪಾಕಿಸ್ತಾನ ದ್ವಿಪಕ್ಷೀಯ ಮಾತುಕತೆ ನಿಗದಿ

ನವದೆಹಲಿ : ಕೊನೆಗೂ ಭಾರತ-ಪಾಕಿಸ್ತಾನ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿಗಳ ದ್ವಿಪಕ್ಷೀಯ ಮಾತುಕತೆ ನಿಗದಿಯಾಗಿದೆ.

ಏ.26 ರಂದು ಹಾರ್ಟ್ ಆಫ್ ಏಷ್ಯಾ ಸಮ್ಮೇಳನದ ಸಂದರ್ಭದಲ್ಲಿ ಭಾರತ-ಪಾಕಿಸ್ತಾನ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿಗಳ ದ್ವಿಪಕ್ಷೀಯ ಮಾತುಕತೆ ನಡೆಯಲಿದೆ. ಪಾಕಿಸ್ತಾನ ವಿದೇಶಾಂಗ ಕಾರ್ಯದರ್ಶಿ ಅಜೀಜ್ ಅಹ್ಮದ್ ಚೌಧರಿ ಹಾರ್ಟ್ ಆಫ್ ಏಷ್ಯಾ ಸಮ್ಮೇಳನದಲ್ಲಿ ಭಾಗವಹಿಸಲು ನವದೆಹಲಿಗೆ ಆಗಮಿಸುತ್ತಿದ್ದಾರೆ. ಈ ವೇಳೆ ವಿದೇಶಾಂಗ ಕಾರ್ಯದರ್ಶಿ ಎಸ್ ಜೈಶಂಕರ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.

ಸಮ್ಮೇಳನದಲ್ಲಿ ಭಾಗವಹಿಸಲಿರುವ ಇನ್ನೂ ಅನೇಕ ದೇಶಗಳ ವಿದೇಶಾಂಗ ಕಾರ್ಯದರ್ಶಿಗಳೊಂದಿಗೆ ಅಜೀಜ್ ಅಹ್ಮದ್ ಚೌಧರಿ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಜ.2 ರಂದು ಪಠಾಣ್ ಕೋಟ್ ವಾಯು ನೆಲೆಯಲ್ಲಿ ಉಗ್ರರ ದಾಳಿ ನಡೆದ ನಂತರ ಭಾರತ-ಪಾಕಿಸ್ತಾನದ ನಡುವೆ ನಡೆಯಬೇಕಿದ್ದ ವಿದೇಶಾಂಗ ಕಾರ್ಯದರ್ಶಿಗಳ ದ್ವಿಪಕ್ಷೀಯ ಮಾತುಕತೆ ಸ್ಥಗಿತಗೊಂಡಿತ್ತು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited