Untitled Document
Sign Up | Login    
Dynamic website and Portals
  
April 27, 2016

ಉಗ್ರ ಜೈನುಲ್ ಅಬೇದಿನ್ ನನ್ನು ಬಂಧಿಸಿದ ಪೊಲೀಸರು

ಮುಂಬೈ : ಕರ್ನಾಟಕ, ಗುಜರಾತ್ ಪೊಲೀಸರು ಹಾಗೂ ಮಹಾರಾಷ್ಟ್ರ ಭಯೋತ್ಪಾದನೆ ನಿಗ್ರಹ ಘಟಕ (ಎಟಿಎಸ್) ಜಂಟಿ ಕಾರ್ಯಾಚರಣೆ ನಡೆಸಿ ಮೋಸ್ಟ್ ವಾಂಟೆಡ್ ಉಗ್ರ ಜೈನುಲ್ ಅಬೇದಿನ್ ​ಎಂಬಾತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಕಳೆದ ಹಲವು ದಿನಗಳಿಂದ ಕಾರ್ಯಾಚರಣೆ ನಡೆಸುತ್ತಿದ್ದ ಪೊಲೀಸರು ಖಚಿತ ಮಾಹಿತಿ ಮೇರೆಗೆ ಮುಂಬೈ ವಿಮಾನ ನಿಲ್ದಾಣದ ಹೊರ ವಲಯದಲ್ಲಿ ಈತನನ್ನು ಬಂಧಿಸಿದ್ದಾರೆ. ಅಬೇದಿನ್ ಇಂಡಿಯನ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಸೇರಿದವನಾಗಿದ್ದ.

13/7 ಮುಂಬೈ ಸ್ಫೋಟ ಪ್ರಕರಣದ ರೂವಾರಿಯಾಗಿದ್ದ ಅಬೇದಿನ್ ದೇಶದ ಅನೇಕ ಕಡೆ ನಡೆದ ಸ್ಫೋಟ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಇಂಡಿಯನ್ ಮುಜಾಹಿದ್ದೀನ್ ಸಂಸ್ಥಾಪಕ ನಾಯಕ ರಿಯಾಜ್ ಭಟ್ಕಳ್ ​ಗೆ ಆಪ್ತನಾಗಿದ್ದ. ಬೆಂಗಳೂರು, ಜೈಪುರ, ಅಹಮದಾಬಾದ್ ​ಗಳಲ್ಲಿ ನಡೆದ ಅನೇಕ ಸ್ಫೋಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಬಗ್ಗೆ ಸಾಕಷ್ಟು ದಾಖಲೆಗಳು ಇದ್ದ ಹಿನ್ನೆಲೆಯಲ್ಲಿ ಈ ಮೂರು ರಾಜ್ಯಗಳ ಪೊಲೀಸ್ ತಂಡ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದೆ.

 

 

Share this page : 
 

Table 'bangalorewaves.bv_news_comments' doesn't exist