ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ಜೌನ್ಪುರದ ಮನೆಯೊಂದರಲ್ಲಿ ಕಚ್ಚಾಬಾಂಬ್ ತಯಾರಿಸುತ್ತಿದ್ದ ಸಂದರ್ಭದಲ್ಲಿ ಬಾಂಬ್ ಸ್ಫೋಟಗೊಂಡು ನಾಲ್ವರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ.
ಘಟನೆಯಲ್ಲಿ ಸಾವನ್ನಪ್ಪಿದವರು ನಾಲ್ವರೂ ಟಿಎಂಸಿ ಕಾರ್ಯಕರ್ತರು ಎಂದು ಹೇಳಲಾಗಿದೆ. ಗಾಯಾಳುಗಳನ್ನು ಮಾಲ್ಡಾ ಮೆಡಿಕಲ್ ಕಾಲೇಜ್ ನ ಆಸ್ಪತ್ರೆಗೆ ದಾಖಲಿಸಾಗಿದೆ.
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ 6ನೇ ಮತ್ತು ಕೊನೆಯ ಹಂತದ ಚುನಾವಣೆ ಮೇ. 5 ರಂದು ನಡೆಯಲಿದೆ. ಪಶ್ಚಿಮ ಬಂಗಾಲ ಚುನಾವಣಾ ಫಲಿತಾಂಶವು ಮೇ 19ರಂದು ಬಹಿರಂಗವಾಗಲಿದೆ. ಹಾಗಾಗಿ ಬಾಂಬ್ ತಯಾರಿಕೆ ನಡೆದಿರುವ ಸಾಧ್ಯತೆ ಇದೆ.
ರಾತ್ರಿ ಬಾಂಗ್ಲಾದೇಶ ಗಡಿಗೆ ಹೊಂದಿಕೊಂಡಿರುವ ಮನೆಯೊಂದರಲ್ಲಿ ಬಾಂಬ್ ತಯಾರಿಸುವಾಗ ಅದು ಸ್ಪೋಟಗೊಂಡಿದೆ. ಸ್ಥಳೀಯ ಅಪರಾಧಿಗಳು ಬಾಂಬ್ ತಯಾರಿಕೆಯಲ್ಲಿ ತೊಡಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.