Untitled Document
Sign Up | Login    
Dynamic website and Portals
  
May 3, 2016

ಲೋಕಾಯುಕ್ತರಾಗಿ ಎಸ್.ಆರ್.ನಾಯಕ್ ನೇಮಕಕ್ಕೆ ರಾಜ್ಯಪಾಲರ ತಿರಸ್ಕಾರ

ಬೆಂಗಳೂರು : ನೂತನ ಲೋಕಾಯುಕ್ತರ ಹುದ್ದೆಗೆ ನಿವೃತ್ತ ನ್ಯಾಯಮೂರ್ತಿ ಎಸ್.ಆರ್.ನಾಯಕ್ ಅವರನ್ನು ನೇಮಕ ಮಾಡುವಂತೆ ರಾಜ್ಯ ಸರ್ಕಾರ ಮಾಡಿದ್ದ ಶಿಫಾರಸ್ಸನ್ನು ರಾಜ್ಯಪಾಲ ವಜುಭಾಯಿ ವಾಲಾ ತಿರಸ್ಕರಿಸಿದ್ದಾರೆ.

ಕೆಲ ತಿಂಗಳ ಹಿಂದೆ ಲೋಕಾಯುಕ್ತ ಹುದ್ದೆಗೆ ನ್ಯಾ.ಎಸ್.ಆರ್.ನಾಯಕ್ ಅವರ ಹೆಸರನ್ನು ಸರ್ಕಾರ ಶಿಫಾರಸು ಮಾಡಿತ್ತು. ಆದರೆ ನಾಯಕ್ ಅವರ ಹೆಸರನ್ನು ರಾಜ್ಯಪಾಲರು ತಿರಸ್ಕರಿಸಿರುವುದರಿಂದ ಸರ್ಕಾರಕ್ಕೆ ಮುಖಭಂಗವಾದಂತಾಗಿದೆ.

ನಾಯಕ್ ಹೆಸರನ್ನು ತಿರಸ್ಕರಿಸಿರುವುದಕ್ಕೆ ರಾಜ್ಯಪಾಲರು ಸರ್ಕಾರಕ್ಕೆ ಕಾರಣಗಳನ್ನು ನೀಡಿದ್ದು, ಈ ಕುರಿತು ಮೂರು ಪುಟಗಳ ಪತ್ರ ಬರೆದಿದ್ದಾರೆ.

ಉಪ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಚಂದ್ರಶೇಖರಯ್ಯ ನೇಮಕಾತಿ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಉಲ್ಲೇಖಿಸಿ, ಈ ತೀರ್ಪಿನ ಅನ್ವಯ ನೂತನ ಲೋಕಾಯುಕ್ತರ ನೇಮಕಾತಿ ಸಂದರ್ಭದಲ್ಲಿ ಲೋಕಾಯುಕ್ತ ಸಲಹಾ ಸಮಿತಿ ಸಭೆಯಲ್ಲಿ ನೂತನ ಲೋಕಾಯುಕ್ತರ ಬಗ್ಗೆ ಸಂಪೂರ್ಣ ಚರ್ಚೆಯಾಗಬೇಕು. ಆದರೆ ಇಲ್ಲಿ ಈರೀತಿಯ ಚರ್ಚೆಗಳು ನಡೆದಿಲ್ಲ ಎಂದು ರಾಜ್ಯಪಾಲರು ತಿಳಿಸಿದ್ದಾರೆ ಎನ್ನಲಾಗಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited