Untitled Document
Sign Up | Login    
Dynamic website and Portals
  
May 4, 2016

ಕೇಂದ್ರ ಸರ್ಕಾರಕ್ಕೆ 2ವರ್ಷ ಹಿನ್ನಲೆ: ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸುವಂತೆ ಪ್ರಧಾನಿ ಕರೆ

ಪ್ರಧಾನಿ ನರೇಂದ್ರ ಮೋದಿ (ಫೈಲ್ ಚಿತ್ರ) ಪ್ರಧಾನಿ ನರೇಂದ್ರ ಮೋದಿ (ಫೈಲ್ ಚಿತ್ರ)

ನವದೆಹಲಿ : ಎನ್.ಡಿ.ಎ ನೇತೃತ್ವದ ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ಎರಡು ವರ್ಷ ಪೂರೈಸುತ್ತಿರುವ ಹಿನ್ನಲೆಯಲ್ಲಿ ಪಕ್ಷದ ಸಂಸದರು ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ಸಂಸದೀಯ ಸಭೆಯಲ್ಲಿ ಮಾತನಾಡಿದ ಅವರು, 2014ರ ಲೋಕಸಭಾ ಚುನಾವಣೆಯಲ್ಲಿ ಜನರಿಗೆ ನೀಡಿದ್ದ ಸಾಕಷ್ಟು ಭರವಸೆಗಳನ್ನು ಈಡೇರಿಸಲಾಗಿದೆ ಎಂದರು. ಸೋಮವಾರ ನಿಧನರಾದ ಭಾರತೀಯ ಜನಸಂಘದ ಸಹ ಸಂಸ್ಥಾಪಕ ಬಲರಾಜ್ ಮಧೋಕ್ ಸೇವೆಯನ್ನು ಸ್ಮರಿಸಿದ ಅವರು, ಪಕ್ಷದ ಸಿದ್ಧಾಂತದ ಬಗ್ಗೆ ಅವರಿಗಿದ್ದ ಬದ್ಧತೆಯನ್ನು ಕೊಂಡಾಡಿದರು.

ಸಭೆ ಬಳಿಕ ಮಾತನಾಡಿದ ಕೇಂದ್ರ ಸಚಿವ ರಾಜೀವ್ ಪ್ರತಾಪ್ ರೂಡಿ, ಕೆಲವೇ ದಿನಗಳಲ್ಲಿ ಸರ್ಕಾರ ಎರಡು ವರ್ಷ ಪೂರೈಸಲಿದೆ. ಈ ಅವಧಿಯಲ್ಲಿ 18 ಸಾವಿರ ಗ್ರಾಮಗಳಿಗೆ ವಿದ್ಯುತ್ ಸಂಪರ್ಕ, 3 ಕೋಟಿ ಬಡ ಕುಟುಂಬಗಳಿಗೆ ಉಚಿತ ಎಲ್.​ಪಿ.ಜಿ ಸಂಪರ್ಕ, ಎಲ್​.ಇ.ಡಿ ಬಲ್ಬ್​ ಗಳ ವಿತರಣೆ, ಮುದ್ರಾ ಯೋಜನೆ ಮೂಲಕ ಸಾವಿರಾರು ಕೋಟಿ ರೂ. ಸಾಲ ನೀಡಲಾಗಿದ್ದು, ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸುವಂತೆ ಪಕ್ಷದ ಸಂಸದರಿಗೆ ಪ್ರಧಾನಿ ಮೋದಿ ತಿಳಿಸಿದ್ದಾರೆ ಎಂದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited