ನವದೆಹಲಿ : ಖಚಿತ ಮಾಹಿತಿ ಮೇರೆಗೆ ದೆಹಲಿ ಪೊಲೀಸರು ದಿಢೀರ್ ಕಾರ್ಯಾಚರಣೆ ನಡೆಸಿ 12 ಮಂದಿ ಶಂಕಿತ ಜೈಶ್-ಇ-ಮೊಹಮ್ಮದ್ ಸಂಘಟನೆಗೆ ಸೇರಿದ ಉಗ್ರರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ರಾಷ್ಟ್ರ ರಾಜಧಾನಿ ದೆಹಲಿಯ ಹಲವು ಪ್ರದೇಶಗಳಲ್ಲಿ ದಾಳಿ ನಡೆಸಿದ ಪೊಲೀಸರು 12 ಮಂದಿ ಜೆಇಎಂ ಸಂಘಟನೆಗೆ ಸೇರಿದ 12 ಮಂದಿ ಶಂಕಿತ ಉಗ್ರರನ್ನು ಬಂಧಿಸಿ, ವಿಚಾರಣೆ ನಡೆಸಿದ್ದಾರೆ.
ಮೇ 3ರಂದು ದೆಹಲಿ ಪೊಲೀಸ್ ವಿಶೇಷ ಘಟಕದ ಅಧಿಕಾರಿಗಳು ಸಂಭಾವ್ಯ ಭಯೋತ್ಪಾದಕ ದಾಳಿಯ ಎಚ್ಚರಿಕೆಯನ್ನು ನೀಡಿದ್ದರು. ಇದರ ಬೆನ್ನಲ್ಲೇ ಕಾರ್ಯಾಚರಣೆಗಿಳಿದ ಪೊಲೀಸರು ಶಂಕಿತ ಉಗ್ರರನ್ನು ವಶಕ್ಕೆ ಪಡೆದಿದ್ದಾರೆ.
ದೆಹಲಿಯ ಎನ್.ಸಿ.ಆರ್ ಪ್ರಾಂತ್ಯ ಮತ್ತು ಉತ್ತರ ಪ್ರದೇಶದ ಸಮೀಪವಿರುವ ಡಿಯೋಬಂದ್ ನಲ್ಲಿ ಶಂಕಿತ ಉಗ್ರರನ್ನು ವಶಕ್ಕೆ ಪಡೆದಿದ್ದಾರೆ. ದಾಳಿ ವೇಳೆ ಪೊಲೀಸರು ಹಲವು ದಾಖಲೆಗಳನ್ನು ಮತ್ತು ಶಂಕಿತ ಉಗ್ರರ ಬಳಿಯಿದ್ದ ಭಾರೀ ಪ್ರಮಾಣದ ಸ್ಫೋಟಕಗಳು ಮತ್ತು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.