ನವದೆಹಲಿ : ಸಾಮಾಜಿಕ ಜಾಲ ತಾಣಗಳನ್ನು ಬಳಸದ ಬಿಜೆಪಿ ಸಚಿವರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಅಸಮಾಧನ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ ಸರ್ಕಾರದ ಸಾಧನೆಗಳನ್ನು ಸೋಶಿಯಲ್ ಮೀಡಿಯಾ ಮೂಲಕ ಜನರಿಗೆ ತಲುಪಿಸುವ ಕೆಲಸವಾಗಬೇಕು. ಎಲ್ಲಾ ಸಚಿವರು ಸಾಮಾಜಿಕ ಜಾಲ ತಾಣಗಳ ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.
ಫೇಸ್ ಬುಕ್ ಮತ್ತು ಟ್ವಿಟರ್ ಗಳನ್ನುಬಳಸದೇ ಇರುವ ಸಚಿವರಿಗೆ ಅದನ್ನು ಹೇಳಿಕೊಡಲು ಇಂಧನ ಸಚಿವ ಪೀಯುಷ್ ಗೋಯಲ್, ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರಿಗೆ ಜವಾಬ್ದಾರಿಯನ್ನು ವಹಿಸಿದ್ದಾರೆ.
ಸಾಮಾಜಿಕ ಜಾಲತಾಣ ಉಪಯೋಗಿಸುವಲ್ಲಿ ಮುಂಚೂಣಿಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಟ್ವೀಟರ್ ನಲ್ಲಿ 19.7 ಲಕ್ಷ ಫಾಲೋವರ್ಸ್ ಅನ್ನು ಹೊಂದಿದ್ದು, 3 ಕೋಟಿ ಜನ ಇವರ ಫೇಸ್ ಬುಕ್ ಪೇಜ್ ಲೈಕ್ ಮಾಡಿದ್ದಾರೆ.