ಡೆಹ್ರಾಡೂನ್ : ಮೇ 10ರಂದು ಉತ್ತರಾಖಂಡ ವಿಧಾನಸಭೆಯಲ್ಲಿ ವಿಶ್ವಾಸಮತವನ್ನು ಸಾಬೀತುಪಡಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ಉತ್ತರಾಖಂಡದಲ್ಲಿ ಸದ್ಯ ರಾಷ್ಟ್ರಪತಿ ಆಡಳಿತ ಜಾರಿಯಲ್ಲಿದ್ದು ,ಕೇಂದ್ರ ಸರಕಾರದ ಒಪ್ಪಿಗೆ ಪಡೆದು ಸುಪ್ರೀಂ ಕೋರ್ಟ್ ಮೇ 10 ರಂದು ಬೆಳಗ್ಗೆ 10 ರಿಂದ 1 ಗಂಟೆಯ ಒಳಗೆ ಬಹುಮತ ಸಾಬೀತು ಪಡಿಸಲು ಸೂಚಿಸಿದೆ.
ಅಮಾನಾತಾಗಿರುವ 9 ಕಾಂಗ್ರೆಸ್ ಶಾಸಕರು ಬಹುಮತ ಸಾಬೀತು ಪ್ರಕ್ರಿಯೆಯಲ್ಲಿ ಭಾಗಿಯಾಗಬಾರದು ಎಂದು ಕೋರ್ಟ್ ಸೂಚನೆ ನೀಡಿದೆ. ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಅವರು ಬಹುಮತ ಸಾಬೀತು ಪಡಿಸಲು ಅವಕಾಶವಿದೆ ಎಂದು ನ್ಯಾಯಾಲಯ ಹೇಳಿದೆ.
ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನಿಂದಾಗಿ 70 ಸದಸ್ಯ ಬಲದ ವಿಧಾನ ಸಭೆಯಲ್ಲಿ ಸಂಖ್ಯಾಬಲ 61ಕ್ಕೆ ಕುಸಿದಿದೆ. 31 ಸದಸ್ಯ ಬಲ ಪಡೆದರೆ ಬಹುಮತ ಹೊಂದಿದಂತಾಗುತ್ತದೆ. ಬಿಜೆಪಿ 27 ಶಾಸಕರನ್ನು ಹೊಂದಿದೆ.