Untitled Document
Sign Up | Login    
Dynamic website and Portals
  
May 7, 2016

ಉತ್ತರ ಪ್ರದೇಶದಲ್ಲಿ ಬರ ಪರಿಸ್ಥಿತಿ: ತುರ್ತು ನೆರವಿಗೆ ಪ್ರಧಾನಿ ನಿರ್ದೇಶನ

ಪ್ರಧಾನಿ ನರೇಂದ್ರ ಮೋದಿ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ : ಉತ್ತರ ಪ್ರದೇಶದ ಬರ ಪರಿಸ್ಥಿತಿ ಬಗ್ಗೆ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ಜೊತೆಗೆ ಪರಾಮರ್ಶಿಸಿರುವ ಪ್ರಧಾನಿ ನರೇಂದ್ರ ಮೋದಿ, ರಾಜ್ಯ ಸಲ್ಲಿಸಿದ ಮನವಿಗೆ ಅನುಗುಣವಾಗಿ ತಕ್ಷಣವೇ ಅಗತ್ಯ ನೆರವಿಗೆ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದಾರೆ.

ನೀರಿನ ಅಭಾವ ಸೇರಿದಂತೆ ವಿವಿಧ ವಿಚಾರಗಳನ್ನು ಚರ್ಚಿಸಿದ ಪ್ರಧಾನಿ ಮೋದಿ ಬರದಿಂದ ಉದ್ಭವಿಸಿರುವ ಜನರ ಸಮಸ್ಯೆಗಳ ನಿವಾರಣೆಗೆ ಕೇಂದ್ರ ಮತ್ತು ರಾಜ್ಯ ಒಗ್ಗಟ್ಟಾಗಿ ಶ್ರಮಿಸಬೇಕು ಎಂದು ಹೇಳಿದ್ದಾರೆ ಎಂದು ಪಿಎಂಒ ಪ್ರಕಟಣೆ ತಿಳಿಸಿದೆ.

ಬರಸಮಸ್ಯೆಗೆ ಮಧ್ಯಮಾವಧಿ ಹಾಗೂ ದೀರ್ಘಾವಧಿಯ ಪರಿಹಾರಗಳಿಗೆ ಒತ್ತು ನೀಡುವಂತೆ ಪ್ರಧಾನಿ ಸಲಹೆ ನೀಡಿದ್ದಾರೆ. ಬುಂದೇಲ್ ​ಖಂಡ್ ಪ್ರದೇಶ ಸೇರಿದಂತೆ ರಾಜ್ಯದಲ್ಲಿನ ಬರ ಪರಿಸ್ಥಿತಿಯಿಂದ ಉದ್ಭವಿಸಿದ ಸಮಸ್ಯೆಗಳ ನಿವಾರಣೆಗೆ ಕೈಗೊಳ್ಳಲಾದ ಕ್ರಮಗಳನ್ನು ಯಾದವ್ ವಿವರಿಸಿದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited