ನವದೆಹಲಿ : ಬಿಸಿಸಿಐ (ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ) ಅಧ್ಯಕ್ಷ ಸ್ಥಾನಕ್ಕೆ ಶಶಾಂಕ್ ಮನೋಹರ್ ರಾಜೀನಾಮೆ ನೀಡಿದ್ದಾರೆ.
2015ರ ಸೆಪ್ಟೆಂಬರ್ನಲ್ಲಿ ಜಗಮೋಹನ್ ದಾಲ್ಮಿಯಾ ನಿಧನದ ನಂತರ ಈ ಹುದ್ದೆಗೇರಿದ್ದ ಶಶಾಂಕ್, 7 ತಿಂಗಳು ಸೇವೆ ಸಲ್ಲಿಸಿದ್ದರು. ಆದರೆ ಐಸಿಸಿ ಅಧ್ಯಕ್ಷರಾಗಿರುವವರು 2 ಸ್ಥಾನಗಳಲ್ಲಿ ಮುಂದುವರೆಯಬಾರದು ಎಂದು ಐಸಿಸಿ ಕಾರ್ಯನಿರ್ವಾಹಕ ಮಂಡಳಿ ನಿರ್ಣಯ ತೆಗೆದುಕೊಂಡ ಹಿನ್ನೆಲೆಯಲ್ಲಿ ಅವರು ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಬಿಸಿಸಿಐ ಕಾರ್ಯದರ್ಶಿ ಅನುರಾಗ್ ಠಾಕೂರ್ ಗೆ ತಮ್ಮ ರಾಜೀನಾಮೆ ಪತ್ರ ರವಾನಿಸಿದ್ದಾರೆ. ನನ್ನ ಅವಧಿಯಲ್ಲಿ ಬೆಂಬಲ ನೀಡಿದ ಎಲ್ಲ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ಧನ್ಯವಾದ ಹೇಳುತ್ತಿದ್ದೇನೆ. ಭವಿಷ್ಯದ ದಿನಗಳಲ್ಲಿ ಕ್ರಿಕೆಟನ್ನು ಇನ್ನಷ್ಟು ಎತ್ತರಕೇರಿಸುವ ದೃಷ್ಟಿಯಲ್ಲಿ ಎಲ್ಲರಿಗೂ ಶುಭಕೋರುತ್ತೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ವಿಶ್ವ ಕ್ರಿಕೆಟ್ ನಲ್ಲಿಯೇ ಶ್ರೀಮಂತ ಕ್ರಿಕೆಟ್ ಸಂಸ್ಥೆಯಾಗಿರುವ ಬಿಸಿಸಿಐ ನೂತನ ಅಧ್ಕಕ್ಷ ಸ್ಥಾನಕ್ಕೆ ಮೇ 14 ರಂದು ಚುನಾವಣೆ ನಡೆಯಲಿದೆ.