Untitled Document
Sign Up | Login    
Dynamic website and Portals
  
May 11, 2016

ಉತ್ತರಾಖಂಡದಲ್ಲಿ ಬಹುಮತ ಗಳಿಸುವಲ್ಲಿ ಹರೀಶ್ ರಾವತ್ ಯಶಸ್ವಿ

ಉತ್ತರಾಖಂಡದಲ್ಲಿ ಬಹುಮತ ಗಳಿಸುವಲ್ಲಿ ಹರೀಶ್ ರಾವತ್ ಯಶಸ್ವಿ

ಡೆಹ್ರಾಡೂನ್ : ದೇಶಾದ್ಯಂತ ಕುತೂಹಲ ಮೂಡಿಸಿದ್ದ ಉತ್ತರಾಖಂಡ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಹರೀಶ್ ರಾವತ್ ಬಹುಮತ ಸಾಬೀತು ಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವಿಧಾನಸಭೆಯಲ್ಲಿ ನಡೆದಿದ್ದ ವಿಶ್ವಾಸಮತ ಯಾಚನೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತಗಳಿಸಿದೆ ಎಂದು ಸುಪ್ರೀಂ ಕೋರ್ಟ್ ಅಧಿಕೃತವಾಗಿ ಘೋಷಿಸಿದೆ. ಈ ಹಿನ್ನಲೆಯಲ್ಲಿ ಉತ್ತರಾಖಂಡದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹಿಂಪಡೆಯುವುದಾಗಿ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಗೆ ತಿಳಿಸಿದೆ. ಇದರಿಂದಾಗಿ ಹರೀಶ್ ರಾವತ್ ಮತ್ತೆ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ.

ಉತ್ತರಾಖಂಡವಿಧಾನಸಭೆಯ ಅರ್ಹ 61 ಮಂದಿ ಶಾಸಕರ ಬಲಾಬಲ ಪರೀಕ್ಷೆಯಲ್ಲಿ ಹರೀಶ್ ರಾವತ್ ಅವರು 33 ಮತ ಪಡೆದು ಅಗ್ನಿಪರೀಕ್ಷೆಯಲ್ಲಿ ಜಯಶಾಲಿಯಾಗಿದ್ದಾರೆ. ರಾವತ್ ವಿರುದ್ಧ 28 ಮತಗಳು ಚಲಾವಣೆಗೊಂಡಿವೆ. ಇನ್ನು ಅನರ್ಹ ಶಾಸಕರು ಮತ ಚಲಾಯಿಸುವಂತಿಲ್ಲ ಎಂದು ನ್ಯಾಯಾಲಯ ಸೂಚಿಸಿತ್ತು.

ಈ ನಡುವೆ ಉತ್ತರಾಖಂಡದಲ್ಲಿ ಕಾಂಗ್ರೆಸ್ ಬಹುಮತ ಪಡೆದಿರುವುದಾಗಿ ಸುಪ್ರೀಂಕೋರ್ಟ್ ಘೋಷಿಸಿಸುತ್ತಿದ್ದಂತೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited