ನವದೆಹಲಿ : ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಟಿಎಂಸಿ ಮುಖ್ಯಸ್ಥೆ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಎಐಎಡಿಎಂಕೆ ಮುಖ್ಯಸ್ಥೆ ತಮಿಳುನಾಡು ಸಿಎಂ ಜೆ.ಜಯಲಲಿತಾ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಘೋಷಣೆಯಾಗುತ್ತಿದ್ದಂತೆಯೇ ಉಭಯ ನಾಯಕಿಯರಿಗೆ ದೂರವಾಣಿ ಕರೆ ಮಾಡಿದ್ದು, ಗೆಲುವಿಗಾಗಿ ಅಭಿನಂದನೆ ಸಲ್ಲಿಸಿದ್ದೇನೆ. ಅಲ್ಲದೆ ಶುಭ ಕೋರಿದ್ದೇನೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಇದೇ ವೇಳೆ ಅಸ್ಸಾಂನಲ್ಲಿ ಬಿಜೆಪಿ ಅಧಿಕಾರಕ್ಕೇರುತ್ತಿದ್ದು, ಪಕ್ಷದ ಗೆಲುವಿಗಾಗಿ ಶ್ರಮಿಸಿದ ಎಲ್ಲ ಕಾರ್ಯಕರ್ತರಿಗೆ ಮತ್ತು ಮತದಾರರಿಗೆ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
ಇನ್ನು ಕೇರಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಖಾತೆ ತೆರೆದಿದ್ದು, 1 ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಈ ಹಿನ್ನಲೆಯಲ್ಲಿ ಕೇರಳ ಬಿಜೆಪಿ ಘಟಕಕ್ಕೆ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದು, ಕೇರಳದಲ್ಲಿ ಪಕ್ಷದ ಈ ಸ್ಥಿತಿಗೆ ಇಟ್ಟಿಗೆ ಯ ಮೇಲೆ ಇಟ್ಟಿಗೆ ಇಟ್ಟು ದಶಕಗಳಿಂದ ಪಕ್ಷ ಕಟ್ಟುವ ಕೆಲಸ ಮಾಡಿದ ಕಾರ್ಯಕರ್ತರ ಶ್ರಮ ಕಾರಣ ,ನಾವೀಗ ಕೇರಳದಲ್ಲಿ ಜನರ ಗಟ್ಟಿ ಧ್ವನಿಯಾಗಿದ್ದೇವೆ ಎಂದು ಹೇಳಿದ್ದಾರೆ.