Untitled Document
Sign Up | Login    
Dynamic website and Portals
  
May 21, 2016

ಆಪಲ್ ಸಿಇಒ ಟಿಮ್ ಕುಕ್ -ಪ್ರಧಾನಿ ಮೋದಿ ಭೇಟಿ

ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದ ಆಪಲ್ ಸಿಇಒ ಟಿಮ್ ಕುಕ್ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದ ಆಪಲ್ ಸಿಇಒ ಟಿಮ್ ಕುಕ್

ನವದೆಹಲಿ : ಭಾರತ ಪ್ರವಾಸದಲ್ಲಿರುವ ಆಪಲ್ ಸಿಇಒ ಟಿಮ್ ಕುಕ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.

ದೆಹಲಿಗೆ ಆಗಮಿಸಿರುವ ಕುಕ್, ರೇಸ್ ಕೋರ್ಸ್​ನ ನಂ.7 ನಿವಾಸದಲ್ಲಿ ಪ್ರಧಾನಿ ಮೋದಿಯವರನ್ನು ಭೇಟಿಯಾದರು. ಈ ವೇಳೆ ಕುಕ್ ಅವರು ಪ್ರಧಾನಿಯವರ ಮೊಬೈಲ್ ಆಪ್​ನ ಅಪ್ ​ಡೇಟೆಡ್ ಆವೃತ್ತಿಯನ್ನು ಬಿಡುಗಡೆ ಮಾಡಿದರು.

‘ಧನ್ಯವಾದಗಳು ಟಿಮ್ ಕುಕ್! ಗೆಳೆಯರೆ, ಸ್ವಯಂ ಸೇವೆಗೆ ಸ್ವಾಗತ. ನಿಮ್ಮ ಅಭಿಪ್ರಾಯಗಳು ಮತ್ತು ಪ್ರಯತ್ನಗಳು ಯಾವಾಗಲೂ ನಮ್ಮನ್ನು ಶ್ರೀಮಂತಗೊಳಿಸುತ್ತವೆ’ ಎಂದು ಮೋದಿ ಕುಕ್ ಭೇಟಿಯ ಬಳಿಕ ಟ್ವೀಟ್ ಮಾಡಿದ್ದಾರೆ.

ಕುಕ್ ಜೊತೆಗಿನ ತಮ್ಮ ಫೊಟೋವನ್ನೂ ಪ್ರಧಾನಿ ಟ್ವಿಟ್ಟರ್ ​ನಲ್ಲಿ ಪೋಸ್ಟ್ ಮಾಡಿದ್ದು, ಪ್ರಧಾನಿ ಟ್ವೀಟ್​ಗೆ ಉತ್ತರಿಸಿರುವ ಕುಕ್ ಅವರು ‘ಮಹಾನ್ ಸಭೆಗಾಗಿ ಧನ್ಯವಾದಗಳು ಪ್ರಧಾನಿ ನರೇಂದ್ರ ಮೋದಿಯವರೇ. ಭಾರತಕ್ಕೆ ಇನ್ನೊಂದು ಭೇಟಿಯನ್ನು ಎದುರು ನೋಡುತ್ತಿದ್ದೇನೆ. ಆಪ್​ನಲ್ಲಿ ಶುಭಾಶಯಗಳು’ ಎಂದು ತಿಳಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Business & Economics

ಎಸ್‌.ಎಂ.ಕೃಷ್ಣ ಅಳಿಯ ಸಿದ್ಧಾರ್ಥ ಮಾಲಿಕತ್ವದ ಕೆಫೆ ಕಾಫಿ ಡೇ ಮೇಲೆ ಐಟಿ ದಾಳಿ
  • ಎಸ್‌.ಎಂ.ಕೃಷ್ಣ ಅಳಿಯ ಸಿದ್ಧಾರ್ಥ ಮಾಲಿಕತ್ವದ ಕೆಫೆ ಕಾಫಿ ಡೇ ಮೇಲೆ ಐಟಿ ದಾಳಿ
  • ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅಳಿಯ ಸಿದ್ಧಾರ್ಥ ಮಾಲಿಕತ್ವದ ಕೆಫೆ ಕಾಫಿ ಡೇ ಮೇಲೆ ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
  • ಆರ್ ಬಿಐ ನೂತನ ಅಧ್ಯಕ್ಷರಿಂದ ಮೊದಲ ಹಣಕಾಸು ನೀತಿ ಪ್ರಕಟ
  • ಸಾಮಾನ್ಯ ಬಜೆಟ್ ನೊಂದಿಗೆ ರೈಲ್ವೆ ಬಜೆಟ್ ವಿಲೀನ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited