Untitled Document
Sign Up | Login    
Dynamic website and Portals
  
May 22, 2016

ಇರಾನ್ ಗೆ ಪ್ರಯಾಣ ಬೆಳೆಸಿದ ಪ್ರಧಾನಿ ಮೋದಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಅಧ್ಯಕ್ಷ ಹಸನ್ ರೌಹಾನಿ ಅವರ ಆಹ್ವಾನದ ಮೇರೆಗೆ ಎರಡು ದಿನಗಳ ಇರಾನ್ ಪ್ರವಾಸ ಕೈಗೊಂಡಿದ್ದಾರೆ.

ಪ್ರವಾಸಕ್ಕೆ ಮುನ್ನ ಪತ್ರಕರ್ತರೊಂದಿಗೆ ಮಾತನಾಡಿದ್ದ ಪ್ರಧಾನಿ ಛಬಹರ್ ತ್ರಿಪಕ್ಷೀಯ ಒಪ್ಪಂದಕ್ಕೆ ತಾವು ಪ್ರಾಮುಖ್ಯತೆ ನೀಡುವುದಾಗಿ ತಿಳಿಸಿದ್ದಾರೆ.

ಇರಾನ್ ​ನಲ್ಲಿ ಮೋದಿ ಅವರ ಸ್ವಾಗತಕ್ಕಾಗಿ ಸಂಭ್ರಮೋತ್ಸಾಹದೊಂದಿಗೆ ಸಿದ್ಧತೆಗಳನ್ನು ಮಾಡಲಾಗಿದ್ದು, ಮೋದಿಯವರು ಛಬಹರ್ ಬಂದರು ಒಪ್ಪಂದಕ್ಕೆ ಆದ್ಯತೆ ನೀಡುವ ನಿರೀಕ್ಷೆ ಇದೆ.

ಭೇಟಿ ಕಾಲದಲ್ಲಿ ಮೋದಿಯವರು ಇರಾನ್ ಅಧ್ಯಕ್ಷ ಹಸನ್ ರೌಹಾನಿ ಮತ್ತು ಇರಾನ್​ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖೊಮೇನಿ ಅವರ ಬಳಿ ಮಾತುಕತೆ ನಡೆಸಲಿದ್ದಾರೆ. ಈ ಮಾತುಕತೆಯು ಭಾರತ ಮತ್ತು ಇರಾನ್ ಮಧ್ಯೆ ಆಯಕಟ್ಟಿನ ಪಾಲುದಾರಿಕೆ ಮುಂದುವರೆಸುವ ನಿಟ್ಟಿನಲ್ಲಿ ಹೆಚ್ಚಿನ ಅವಕಾಶಗಳನ್ನು ತೆರೆದಿಡಲಿದೆ ಎಂದು ನಂಬಲಾಗಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited