ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶವನ್ನು ಮೇ 25 ರಂದು ಪ್ರಕಟಿಸಲಾಗುವುದು ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.
ಈ ಬಗ್ಗೆ ಮಾತನಾಡಿರುವಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕ ರಾಮೇಗೌಡ, ಮಾರ್ಚ್ ಹಾಗೂ ಎಪ್ರಿಲ್ ತಿಂಗಳಲ್ಲಿ ನಡೆದ ಪಿಯು ಪರೀಕ್ಷಾ ಫಲಿತಾಂಶ ಮೇ 25ರಂದು ಬೆಳಗ್ಗೆ 11 ಗಂಟೆಗೆ ಪ್ರಕಟಿಸಲಿದ್ದೇವೆ. ಮಧ್ಯಾಹ್ನ 12 ಗಂಟೆ ನಂತರ ಫಲಿತಾಂಶವು ವಿದ್ಯಾರ್ಥಿಗಳಿಗೆ ಲಭ್ಯವಾಗಲಿದೆ ಎಂದು ಹೇಳಿದ್ದಾರೆ.
ಪ್ರಲಿತಾಂಶವನ್ನು ಮೇ 26ರಂದು ಕಾಲೇಜುಗಳಲ್ಲಿ ಅಧಿಕೃತವಾಗಿ ಪ್ರಕಟಿಸಲಾಗುವುದು. ಇದೇ ಮೊದಲ ಬಾರಿಗೆ ಇಲಾಖೆಯು ಉತ್ತರ ಪತ್ರಿಕೆ ಪ್ರತಿಗಳನ್ನು ಪೋಸ್ಟ್ ಮೂಲಕ ಕಳುಹಿಸುವ ಬದಲು ಆನ್ಲೈನ್ನಲ್ಲೇ ನೀಡಲು ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.
ಅಲ್ಲದೇ ಖಾಸಗಿ ವೆಬ್ಸೈಟ್ಗಳು ಫಲಿತಾಂಶ ಪ್ರಕಟಿಸುವುದನ್ನು ನಿಷೇಧಿಸಲಾಗಿದ್ದು ಸರ್ಕಾರಿ ವೆಬ್ಸೈಟ್ಗಳಲ್ಲಿ ಮಾತ್ರ ಫಲಿತಾಂಶ ಪ್ರಕಟವಾಗಲಿದೆ ಎಂದು ಹೇಳಿದ್ದಾರೆ.
ಫಲಿತಾಂಶ ಪ್ರಕಟವಾಗಲಿರುವ ವೆಬ್ಸೈಟ್ ವಿಳಾಸ- karresult.nic.in, pue.kar.nic.in