ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಎನ್.ಡಿ.ಎ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವಸಂತಗಳನ್ನು ಪೂರೈಸಿರುವ ಹಿನ್ನಲೆಯಲ್ಲಿ, ಟ್ರ್ಯಾನ್ಸ್ ಫಾರ್ವಿುಂಗ್ ಇಂಡಿಯಾ ರಾಷ್ಟ್ರಗೀತೆ ವಿಡಿಯೋವನ್ನು ಟ್ವೀಟ್ ಮಾಡುವ ಮೂಲಕ ಪ್ರಧಾನಿ ಮೋದಿ ಬಿಡುಗಡೆ ಮಾಡಿದ್ದಾರೆ.
ಸರ್ಕಾರದ ಸಂಭ್ರಮಾಚರಣೆಯನ್ನು ಹಂಚಿಕೊಂಡಿರುವ ಮೋದಿ, ಮೇರಾ ದೇಶ್ ಬದಲ್ ರಹಾ ಹೈ, ಆಗೇ ಬಡ್ ರಹಾ ಹೈ ಎಂದು ಟ್ವೀಟ್ ಮಾಡಿ ವಿಡಿಯೋ ಪೋಸ್ಟ್ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಎರಡು ವರ್ಷ ಪೂರೈಸಿರುವ ಹಿನ್ನೆಲೆ ತಮ್ಮ ಸಾಧನೆಗಳ ಬಗ್ಗೆ ವಿವರಿಸುವ ‘ಸಾಧನಾ ಮೆರವಣಿಗೆ’ಗೆ ಚಾಲನೆ ನೀಡಲಿದ್ದು, ಉತ್ತರ ಪ್ರದೇಶದ ಸಹರಾನ್ಪುರದಲ್ಲಿ ಬೃಹತ್ ರ್ಯಾಲಿ, ವಿಜಯೋತ್ಸವ ಕಾರ್ಯಕ್ರಮ ನಡೆಯಲಿದೆ. ಈ ವೇಳೆ ಪ್ರಧಾನಿ ಮೋದಿ ಭಾಗವಹಿಸಲಿದ್ದು, ಭಾಷಣ ಮಾಡಲಿದ್ದಾರೆ.