Untitled Document
Sign Up | Login    
Dynamic website and Portals
  
May 29, 2016

ಧಾರಾಕಾರ ಮಳೆಗೆ ಕೇದಾರನಾಥ ತತ್ತರ

ಡೆಹ್ರಾಡೂನ್ : ಕೇದಾರದಲ್ಲಿ ಎರಡುದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಕೇದಾರನಾಥ ಅಕ್ಷರಶಃ ನಲುಗಿ ಹೋಗಿದೆ. ಮಳೆಯ ಅಬ್ಬರಕ್ಕೆ 30ಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿದ್ದು, ಹಲವು ಜಾನುವಾರುಗಳು ಸಾವನ್ನಪ್ಪಿವೆ.

ಈಗಾಗಲೇ ಕೇದಾರನಾಥ ಹಾಗೂ ಯಮುನೋತ್ರಿಗೆ ತೆರಳುವ ಮಾರ್ಗ ಬಂದ್ ಆಗಿದೆ. ರಾಜಧಾನಿ ಡೆಹ್ರಾಡೂನ್​ನಲ್ಲಿ ಸಹ ಗುಡುಗು ಸಹಿತ ಮಳೆ ಮುಂದುವರೆದಿದೆ. ಮರಗಳು ವಿದ್ಯುತ್ ತಂತಿಗಳ ಮೇಲೆ ಮುರಿದು ಬಿದ್ದ ಪರಿಣಾಮ ನಗರದಲ್ಲಿ ಕಗ್ಗತ್ತಲು ಆವರಿಸಿದೆ.

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮರಗಳು ಉರುಳಿದ ಪರಿಣಾಮ ಯಾತ್ರಿಕರು ಪರದಾಡಬೇಕಾದ ಸ್ಥಿತಿ ಇದೀಗ ನಿರ್ಮಾಣವಾಗಿದೆ. ಸಿಯಾಲ್​ಕೋಟ್ ಹಾಗೂ ಕುಥಿಯಾನ ನಗರಗಳು ತುರ್ತು ಪರಿಸ್ಥಿತಿ ಎದುರಿಸುತ್ತಿವೆ. ಮುಖ್ಯ ಅಭಿವೃದ್ಧಿ ಅಧಿಕಾರಿ (ಸಿಡಿಓ) ಮಹ್ಮದ್ ಇಕ್ಬಾಲ್ ಪ್ರಕಾರ ಸಿಯಾಲ್​ಕೋಟ್​ನಲ್ಲಿ 10 ಮನೆಗಳು ಮಳೆಯಿಂದ ಹಾನಿಗೊಳಗಾದರೆ, ಕುಥಿಯಾನಾದಲ್ಲಿ 20 ಮನೆಗಳು ಹುತಿಯಾಗಿವೆ ಎಂದು ತಿಳಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Agriculture & Environment

ವರುಣನ ಆರ್ಭಟಕ್ಕೆ ತತ್ತರಿಸಿದ ಜನತೆ;ಏಳು ಜನರು ಸಾವು ಇನ್ನೂ ಎರಡುದಿನ ಕಾಲ ಭಾರೀ ಮಳೆ ಎಚ್ಚರಿಕೆ
  • ವರುಣನ ಆರ್ಭಟಕ್ಕೆ ತತ್ತರಿಸಿದ ಜನತೆ;ಏಳು ಜನರು ಸಾವು ಇನ್ನೂ ಎರಡುದಿನ ಕಾಲ ಭಾರೀ ಮಳೆ ಎಚ್ಚರಿಕೆ
  • ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಸುರಿದ ಭಾರಿ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಅಮಳೆ ಅವಾಂತರಗಳಿಂದ ಸಂಭವಿಸಿದ ಅನಾಹುತಗಳಲ್ಲಿ ಏಳು ಜನರು ನೀರುಪಾಲಾಗಿದ್ದಾರೆ.
  • ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಬಿಹಾರ, ಒಡಿಶಾದಲ್ಲಿ ಚಂಡಮಾರುತ
  • ವರುಣನ ಅರ್ಭಟಕ್ಕೆ 8 ಜನರು ಬಲಿ: ಮೃತರ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ಪರಿಹಾರ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited