Untitled Document
Sign Up | Login    
Dynamic website and Portals
  
May 29, 2016

ಪ್ರತಿಭಟನೆ ಹಿನ್ನಲೆ: ದಾವಣಗೆರೆಯಲ್ಲಿ ಎನ್​ಎಸ್​ಯುಐ ಕಾರ್ಯಕರ್ತರ ಬಂಧನ

ದಾವಣಗೆರೆ : ದಲಿತ ವಿದ್ಯಾರ್ಥಿ ರೋಹಿತ್ ವೇಮುಲ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಎನ್​ಎಸ್​ಯುಐ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಆಗಮನ ಹಿನ್ನಲೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು 9 ಜನರನ್ನು ಬಂಧಿಸಿದ್ದಾರೆ.


ದಾವಣಗೆರೆಯ ಅಂಬೇಡ್ಕರ್ ವೃತ್ತದ ಬಳಿ ಎನ್​ಎಸ್​ಯುಐ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು. ಪ್ರಧಾನಿ ಆಗಮನದ ಹಿನ್ನಲೆಯಲ್ಲಿ ನಗರದಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದರೂ, ಪೊಲೀಸರ ಎಚ್ಚರಿಕೆ ನಡುವೆಯೂ ಕಾರ್ಯಕರ್ತರು ಪ್ರತಿಭಟನೆ ಮುಂದುವರೆಸಿದ್ದರು. ಪೊಲೀಸರ ಭದ್ರ ಕಾವಲನ್ನೂ ಭೇದಿಸಿದ ಕಾರಣ ಎನ್​ಎಸ್​ಯುಐ ಸಂಘಟನೆಯ 9 ಕಾರ್ಯಕರ್ತರನ್ನು ಬಂಧಿಸಿ ಆಜಾದ್ ನಗರ ಪೊಲೀಸ್ ಠಾಣೆಯಲ್ಲಿ ಇರಿಸಲಾಗಿದೆ.

ಸಮಾವೇಶ ನಡೆಯುವ ಸುತ್ತಮುತ್ತ ಪ್ರದೇಶಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು, ಮುನ್ನೆಚ್ಚರಿಕೆ ಕ್ರಮದ ಅಂಗವಾಗಿ ಕಾರ್ಯಕ್ರಮ ನಡೆಯುವ ಸ್ಥಳದ ಸುತ್ತಮುತ್ತ ಕಪ್ಪು ಬಟ್ಟೆಯನ್ನು ನಿಷೇಧಿಸಲಾಗಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Protest

ಕೆ ಎಸ್ ಒಯು ಮುಚ್ಚದಂತೆ ಎಬಿವಿಪಿ ಪ್ರತಿಭಟನೆ: ಲಘು ಲಾಠಿ ಪ್ರಹಾರ
 • ಕೆ ಎಸ್ ಒಯು ಮುಚ್ಚದಂತೆ ಎಬಿವಿಪಿ ಪ್ರತಿಭಟನೆ: ಲಘು ಲಾಠಿ ಪ್ರಹಾರ
 • ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವನ್ನು ಮುಚ್ಚಲು ಮುಂದಾಗಿರುವ ಸರ್ಕಾರದ ಕ್ರಮ ಖಂಡಿಸಿ ಎಬಿವಿಪಿ ಬೃಹತ್ ಪ್ರತಿಭಟನೆ ಅರಂಭಿಸಿದ್ದು, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.
 • ದೇಶವ್ಯಾಪಿ ಪೆಟ್ರೋಲ್ ಬಂಕ್ ಮುಷ್ಕರ ವಾಪಸ್
 • ಸಿಪಿಎಂ ಕಛೇರಿಗೆ ಮುತ್ತಿಗೆ: ಬಿ ಎಸ್ ಯಡಿಯೂರಪ್ಪ ಸೇರಿದಂತೆ ಹಲವರ ಬಂಧನ
 • The Ultimate Job Portal
  Netzume - Resume Website Gou Products

  Other News

  Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
  © bangalorewaves. All rights reserved. Developed And Managed by Rishi Systems P. Limited