Untitled Document
Sign Up | Login    
Dynamic website and Portals
  
June 1, 2016

ಪೆಟ್ರೋಲ್, ಡೀಸೆಲ್, ಸಬ್ಸಿಡಿ ರಹಿತ ಸಿಲಿಂಡರ್ ದರ ಏರಿಕೆ

ನವದೆಹಲಿ : ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಮತ್ತೆ ಏರಿಕೆಯಾಗಿದೆ. ಪೆಟ್ರೋಲ್ ಬೆಲೆ ಲೀಟರ್ ಗೆ 2.58 ರೂಪಾಯಿ, ಡೀಸೆಲ್ ಬೆಲೆ ಲೀಟರ್ ಗೆ 2.26 ರು. ಏರಿಕೆಯಾಗಿದೆ. ಈ ಮೂಲಕ ಕೇವಲ ಒಂದು ತಿಂಗಳ ಅವಧಿಯಲ್ಲಿ ಸತತ ಮೂರನೇ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾಗುತ್ತಿದೆ.

ಪರಿಷ್ಕೃತ ದರ ಮಧ್ಯರಾತ್ರಿಯಿಂದಲೇ ಜಾರಿಗೆ ಬಂದಿದ್ದು, ದರ ಏರಿಕೆಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಬೆಲೆ ಏರಿಳಿತ ಕಾರಣ ಎಂದು ಹೇಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ಅಂತಾರಾಷ್ಟ್ರೀಯ ತೈಲ ದರವನ್ನಾಧರಿಸಿ ಭಾರತೀಯ ತೈಲೋತ್ಪನ್ನ ಸಂಸ್ಥೆಗಳು ಪೆಟ್ರೋಲ್, ಡೀಸೆಲ್ ಬೆಲೆಯನ್ನು ಪರಿಷ್ಕರಿಸಿವೆ.

ಈ ಹಿಂದೆ ಭಾರತಕ್ಕೆ ಕಚ್ಛಾತೈಲ ರಫ್ತು ಮಾಡುತ್ತಿದ್ದ ಇರಾಕ್ ತೈಲ ಕಂಪನಿಗಳು ಶುಲ್ಕ ವಿನಾಯಿತಿ ತೆಗೆದುಹಾಕಿದ್ದು, ಇದರಿಂದಾಗಿ ದೇಶೀಯ ತೈಲೋತ್ಪನ್ನ ಸಂಸ್ಥೆಗಳೇ ಶುಲ್ಕ ಪಾವತಿ ಮಾಡಬೇಕಿದೆ. ಈ ಹಿನ್ನಲೆಯಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಹೆಚ್ಚಳ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

ಇನ್ನು ಸಬ್ಸಿಡಿ ರಹಿತ ಎಲ್.ಪಿ.ಜಿ ಸಿಲಿಂಡರ್ ದರದಲ್ಲಿ 21 ರೂ ಏರಿಕೆ ಮಾಡಲಾಗಿದೆ. ಅಲ್ಲದೇ ಜೆಟ್ ವಿಮಾನ ಇಂಧನದರದಲ್ಲಿ ಶೇ.9.2ರಷ್ಟು ಏರಿಕೆಯಾಗಿದೆ ಎಂದು ತಿಳಿದುಬಂದಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Infrastructure

ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿಗೆ ಎನ್ ಜಿಟಿ ಅನುಮತಿ
 • ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿಗೆ ಎನ್ ಜಿಟಿ ಅನುಮತಿ
 • ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿಗೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್ ಜಿಟಿ) ಷರತ್ತುಬದ್ಧ ಅನುಮತಿಯನ್ನು ನೀಡಿದೆ.
 • ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಮತ್ತೆ ಇಳಿಕೆ
 • ಪೆಟ್ರೋಲ್, ಡೀಸೆಲ್ ದರ ಮತ್ತೆ ಇಳಿಕೆ
 • The Ultimate Job Portal
  Netzume - Resume Website Gou Products

  Other News

  Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
  © bangalorewaves. All rights reserved. Developed And Managed by Rishi Systems P. Limited