Untitled Document
Sign Up | Login    
Dynamic website and Portals
  
June 6, 2016

ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡ: ಜೂನ್ 9ಕ್ಕೆ ತೀರ್ಪು ಮುಂದೂಡಿದ ನ್ಯಾಯಾಲಯ

ಅಹ್ಮದಾಬಾದ್ : ಗುಜರಾತ್ ನ ಗುಲ್ಬರ್ಗ್ ಸೊಸೈಟಿಯಲ್ಲಿ ನಡೆದಿದ್ದ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗಳ ಶಿಕ್ಷೆ ಪ್ರಮಾಣ ತೀರ್ಪನ್ನು ಅಹ್ಮದಾಬಾದ್ ವಿಶೇಷ ನ್ಯಾಯಾಲಯ ಜೂನ್ 9ಕ್ಕೆ ಮುಂದೂಡಿದೆ.

ಪ್ರಕರಣ ಸಂಬಂಧ ಅಪರಾಧಿಗಳ ಪರ-ವಿರೋಧಿ ವಕೀಲರ ವಾದ ಆಲಿಸಿದ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಪಿ.ಬಿ.ದೇಸಾಯಿ, ಆರೋಪಿಗಳಿಗೆ ಶಿಕ್ಷೆ ಪ್ರಮಾಣವನ್ನು ಜೂನ್ 9ಕ್ಕೆ ಘೋಷಣೆ ಮಾಡುವುದಾಗಿ ಹೇಳಿ ನ್ಯಾಯಾಲಯದ ಕಲಾಪವನ್ನು ಮುಂದೂಡಿದರು. ಇದಕ್ಕೂ ಮೊದಲು ತಮ್ಮ ವಾದ ಮಂಡಿಸಿದ ಪ್ರಾಸಿಕ್ಯೂಷನ್ ಪರ ವಕೀಲ ಎಸ್ ಎಂ ವೋರ್ಹಾ ಅವರು, ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಇವರಿಗೆ ನೀಡುವ ಶಿಕ್ಷೆ ಇತರರಿಗೆ ಮಾದರಿಯಾಗಬೇಕು ಎಂದು ನ್ಯಾಯಾಧೀಶರಲ್ಲಿ ಮನವಿ ಮಾಡಿದರು.

ಪ್ರಕರಣ ಸಂಬಂಧ ಕಳೆದ ಗುರುವಾರ ತನ್ನ ಅಂತಿಮ ತೀರ್ಪು ನೀಡಿದ್ದ ನ್ಯಾಯಾಲಯ ಒಟ್ಟು 50 ಮಂದಿ ಆರೋಪಿಗಳ ಪೈಕಿ 36 ಮಂದಿಯನ್ನು ಸಾಕ್ಷ್ಯಾಧಾರದ ಕೊರತೆಯಿಂದಾಗಿ ಖುಲಾಸೆ ಮಾಡಿ 24 ಮಂದಿ ಆರೋಪಗಳು ಎಂದು ಘೋಷಿಸಿತ್ತು. ಈ ಪೈಕಿ 11 ಆರೋಪಿಗಳ ವಿರುದ್ಧ ಕೊಲೆ ಆರೋಪ ದಾಖಲಾಗಿದ್ದು, ಉಳಿದ 13 ಮಂದಿಯ ವಿರುದ್ಧ ಇತರೆ ಆರೋಪಗಳು ಸಾಬೀತಾಗಿದ್ದವು.

2002ರ ಫೆಬ್ರವರಿ 28 ರಂದು ಗುಜರಾತ್ ​ನ ಅಹಮದಾಬಾದ್​ ನಲ್ಲಿರುವ ಗುಲ್ಬರ್ಗ್ ಸೊಸೈಟಿ ಕಾಲೋನಿಯಲ್ಲಿ ಹಿಂಸಾಚಾರ ನಡೆದಿತ್ತು. ಇದರಲ್ಲಿ ಮಾಜಿ ಕಾಂಗ್ರೆಸ್ ಸಂಸದ ಎಹಸಾಸ್ ಜಫ್ರಿ ಸೇರಿದಂತೆ ಒಟ್ಟು 69 ಜನರು ಸಾವನ್ನಪ್ಪಿದ್ದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited