Untitled Document
Sign Up | Login    
Dynamic website and Portals
  
June 7, 2016

ಅಮೆರಿಕಾ ತಲುಪಿದ ಪ್ರಧಾನಿ ನರೇಂದ್ರ ಮೋದಿ

ಅಮೆರಿಕಾ ತಲುಪಿದ ಪ್ರಧಾನಿ ನರೇಂದ್ರ ಮೋದಿ

ವಾಷಿಂಗ್ಟನ್ : ಪಂಚರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಅಮೆರಿಕಾಗೆ ಭೇಟಿ ನೀಡಿದ್ದಾರೆ. ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮಾ ಅವರ ಆಹ್ವಾನದ ಮೇರೆಗೆ ಇಂದು ವಾಷಿಂಗ್ಟನ್ ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದಾರೆ.

ಎರಡು ದಿನಗಳ ಭೇಟಿಯಲ್ಲಿ ಅಮೆರಿಕಾದ ಜಂಟಿ ಸಂಸತ್ ಅನ್ನು ಉದ್ದೇಶಿಸಿ ಮಾತನಾಡಲಿದ್ದು, ಇದೇ ಸಂದರ್ಭದಲ್ಲಿ ಭಾರತ ಹಾಗೂ ಅಮೆರಿಕಾ ನಡುವೆ ಆರ್ಥಿಕ ವ್ಯವಸ್ಥೆ, ಇಂಧನ, ಪರಿಸರ, ರಕ್ಷಣೆ ಹಾಗೂ ಮುಂತಾದ ವಿಷಯಗಳ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.

ಅಮೆರಿಕಾದ ಥಿಂಕ್ ಟ್ಯಾಂಕ್ ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಇಂದು ಶ್ವೇತಭವನದಲ್ಲಿ ಔತಣಕೂಟ ಆಯೋಜಿಸಲಾಗಿದ್ದು, ಒಬಾಮಾ, ಮೋದಿ ಸೇರಿದಂತೆ ಇತರೆ ಅಧಿಕಾರಿಗಳು ಭಾಗಿಯಾಗಲಿದ್ದಾರೆ. ನಂತರ ಅಮೆರಿಕಾ-ಭಾರತ ಉದ್ಯಮದ ಕುರಿತು ಮೋದಿ ಭಾಷಣ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಅಮೆರಿಕಕ್ಕೆ ನಾಲ್ಕನೇ ಭೇಟಿ ಇದಾಗಿದೆ. ಕಳೆದ ಏಳು ವರ್ಷಗಳಲ್ಲಿ ಭಾರತ-ಅಮೆರಿಕ ಸಂಬಂಧಗಳಲ್ಲಿ ಗಮನಾರ್ಹ ಸುಧಾರಣೆಗಳಾಗಿದ್ದು, ಪ್ರಧಾನಿ ಮೋದಿ ಭೇಟಿಯು ಇದರ ಸಂಭ್ರಮಾಚರಣೆ ಆಗಿರಲಿದೆ. ಕಳೆದ ಏಳು ವರ್ಷಗಳಲ್ಲಿ ಉಭಯ ರಾಷ್ಟ್ರಗಳ ಸಂಬಂಧ ಬಾಂಧವ್ಯದ ಹೊಸ ಎತ್ತರಕ್ಕೆ ತಲುಪಿದೆ ಎಂದು ಶ್ವೇತಭವನದ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited