ನವದೆಹಲಿ : 29 ಮಂದಿ ಸಾವಿಗೆ ಕಾರಣವಾದ ಮಥುರಾ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಆದೇಶಿಸಬೇಕೆಂದು ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಸಿ. ಘೊಷ್ ಮತ್ತು ಅಮಿತವ ರಾಯ್ ಅವರನ್ನೊಳಗೊಂಡ ರಜಾಕಾಲದ ನ್ಯಾಯಪೀಠ ಸಿಬಿಐ ತನಿಖೆ ಕೋರಿದ ಅರ್ಜಿಯನ್ನು ವಜಾಗೊಳಿಸಿದ್ದು, ಸ್ಥಳೀಯ ಆಡಳಿತ ಸೂಕ್ತವಾಗಿ ತನಿಖೆ ನಡೆಸುತ್ತಿಲ್ಲ ಎನ್ನುವ ಬಗ್ಗೆ ಯಾವುದೇ ಸಾಕ್ಷ್ಯಗಳಿಲ್ಲ. ಹೀಗಾಗಿ ಸುಪ್ರೀಂ ಕೋರ್ಟ್, ಸಿಬಿಐ ತನಿಖೆಗೆ ಆದೇಶಿಸಲು ಮುಂದಾಗುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ.
ಮಥುರಾ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸೂಕ್ತ ತನಿಖೆ ನಡೆಸದೇ ಕಾಲಹರಣ ಮಾಡುತ್ತಿದೆ. ಸುಪ್ರೀಂ ಕೋರ್ಟ್ ಈ ವಿಷಯದಲ್ಲಿ ಸ್ವಯಂ ಪ್ರೇರಿತವಾಗಿ ಸಿಬಿಐ ತನಿಖೆಗೆ ಆದೇಶಿಸಬಹುದಾಗಿದೆ ಎಂದು ಬಿಜೆಪಿ ವಕ್ತಾರ ಹಾಗೂ ನ್ಯಾಯವಾದಿ ಅಶ್ವಿನ್ ಉಪಾಧ್ಯಾಯ ಅರ್ಜಿ ಸಲ್ಲಿಸಿದ್ದರು.