ಅಲಹಬಾದ್ : ಉತ್ತರ ಪ್ರದೇಶ ವಿಧಾನಸಭೆಯ ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು ಬಿಜೆಪಿ ಇಂದಿನಿಂದ ತನ್ನ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯನ್ನು ಅಲಹಾಬಾದ್ ನಲ್ಲಿ ಹಮ್ಮಿಕೊಂಡಿದೆ.
ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರೂ ಭಾಗವಹಿಸುವ ಈ ಸಭೆಯಲ್ಲಿ ಉತ್ತರಪ್ರದೇಶ ಚುನಾವಣೆಯಲ್ಲಿ ಜಯ ಸಾಧಿಸುವ ಕುರಿತು ಮಹತ್ವದ ಚರ್ಚೆ ನಡೆಯುವ ನಿರೀಕ್ಷೆ ಇದೆ.
ಕೇಂದ್ರ ಸಚಿವ ಸಂಪುಟದ ಹಿರಿಯ ಸದಸ್ಯರು, ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಸಂಸತ್ ಸದಸ್ಯರು ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ವರ್ಷದಲ್ಲಿ ಬರಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಸಭೆಯು ಕಾರ್ಯಸೂಚಿ ಸಿದ್ಧ ಪಡಿಸಲಿದೆ.
‘ಕಳೆದ ತಿಂಗಳು ಶಹರಾನ್ ಪುರದಲ್ಲಿ ನಡೆಸಿದ ಬೃಹತ್ ಸಮಾವೇಶದಲ್ಲಿ ಇದ್ದಿದ್ದರೆ ಈ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯನ್ನು ನಾನು ಬಿಜೆಪಿಯ ಚುನಾವಣಾ ಕಹಳೆ ಎಂದೇ ಬಣ್ಣಿಸುತ್ತಿದ್ದೆ’ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿದ್ಧಾರ್ಥನಾಥ್ ಸಿಂಗ್ ಹೇಳಿದ್ದಾರೆ.