Untitled Document
Sign Up | Login    
Dynamic website and Portals
  
June 12, 2016

ಕಾರವಾರ: ಸೀಬರ್ಡ್ ನೌಕಾನೆಲೆಯ 2 ಹಂತದ ಕಾಮಗಾರಿ ಆರಂಭ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಿರ್ಮಾಣವಾಗುತ್ತಿರುವ ಸೀಬರ್ಡ್ ನೌಕಾನೆಲೆ2 ಹಂತದ ಕಾಮಗಾರಿ ಆರಂಭವಾಗಿದ್ದು, ಅಮೆರಿಕದ ಪ್ರತಿಷ್ಠಿತ ಏಕಾಮ್ (ಎಇಸಿಒಎಂ) ಸಂಸ್ಥೆ ಕಾಮಗಾರಿ ಮೇಲುಸ್ತುವಾರಿ ನೋಡಿಕೊಳ್ಳುತ್ತಿದೆ.

ಈ ನೌಕೆನೆಲೆ ನಿರ್ಮಾಣ ಕಾಮಗಾರಿ ಪೂರ್ಣಗೊಂಡರೆ ಏಷ್ಯಾಖಂಡದಲ್ಲೇ ಅತೀ ದೊಡ್ಡ ನೌಕಾನೆಲೆ ಎಂಬ ಕೀರ್ತಿಗೆ ಭಾಜನವಾಗಲಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನೇತೃತ್ವದ ರಕ್ಷಣೆ ಕುರಿತ ಸಂಪುಟ ಸಮಿತಿ ಸೀಬರ್ಡ್ ನೌಕಾನೆಲೆಯ 2ನೇ ಹಂತದ ಕಾಮಗಾರಿಗೆ ಅನುಮೋದನೆ ನೀಡಿತ್ತು. 2017-18ರಲ್ಲಿ ಈ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಹೇಳಲಾಗುತ್ತಿದೆ.

ಸೀಬರ್ಡ್ ನೌಕಾ ನೆಲೆಯ ಯೋಜನೆಯ ವೆಚ್ಚ ಬರೊಬ್ಬರಿ 3 ಬಿಲಿಯನ್ ಅಮೆರಿಕನ್ ಡಾಲರ್ (12,750 ಕೋಟಿ ರೂ.) ಮೊತ್ತದಾಗಿದ್ದು, ಇಂತಹ ಪ್ರತಿಷ್ಠಿತ ಕಾಮಗಾರಿ ಯೋಜನೆಯ ನಿರ್ವಹಣಾ ಸಲಹೆಗಾರರಾಗಿ ಅಮೆರಿಕಏಕಾಮ್ ಸಂಸ್ಥೆ ಟೆಂಡರ್ ಪಡೆದು ಕಾಮಗಾರಿ ಆರಂಭಿಸಿದೆ.

ಟೋಫೊಗ್ರಾಫಿಕಲ್ (ಭೌಗೋಳಿಕ) ಸರ್ವೆ, ನೌಕಾ ಶಸ್ತ್ರಾಗಾರ ಹಾಗೂ ಟೌನ್​ಶಿಪ್ ನಿರ್ಮಾಣಕ್ಕೆ ಈಗಾಗಲೇ ಟೆಂಡರ್ ಕರೆಯಲಾಗಿದೆ. ಪ್ರೊಜೆಕ್ಟ್ 2-ಎ ಪೂರ್ಣವಾದ ನಂತರ ಸುಮಾರು 1 ಲಕ್ಷ ಜನ ನೌಕಾ ನೆಲೆ ಪ್ರದೇಶಕ್ಕೆ ಬರಲಿದ್ದು, ಅದಕ್ಕಾಗಿ ನೌಕಾನೆಲೆಯ 25 ಕಿ.ಮೀ. ವ್ಯಾಪ್ತಿಯಲ್ಲಿ 1,224 ಕೋಟಿ ರು. ವೆಚ್ಚದಲ್ಲಿ 4 ಪ್ರತ್ಯೇಕ ಟೌನ್​ಶಿಪ್ ನಿರ್ಮಾಣಕ್ಕೆ ಯೋಜನೆ ಕೈಗೊಳ್ಳಲಾಗಿದೆ.
10 ವಸತಿ ಸಮುಚ್ಚಯ (ರೆಸಿಡೆನ್ಸಿಯಲ್ ಟವರ್), ಶಾಲೆ, ಮೈದಾನ, ಶಾಪಿಂಗ್ ಮಾಲ್ ನಿರ್ಮಾಣ ಈ ಯೋಜನೆಯಲ್ಲಿ ಸೇರಿದ್ದು, ಕಾರವಾರದ ಬಿಣಗಾ, ಬೈತಖೋಲ್ ಭಾಗದಲ್ಲಿ ಮೊದಲ ವಸತಿ ಸಮುಚ್ಚಯ ನಿರ್ಮಾಣವಾಗಲಿದೆ. 140 ಕೋಟಿ ರು. ವೆಚ್ಚದ ಶಸ್ತ್ರಾಗಾರ, ಮಿಸೈಲ್ ತಂತ್ರಜ್ಞಾನ ಕೇಂದ್ರ, ನೌಕಾ ಶಸ್ತ್ರಾಸ್ತ್ರ ಘಟಕ ನಿರ್ಮಾಣಕ್ಕೆ ಪ್ರತ್ಯೇಕ ಟೆಂಡರ್ ಕರೆಯಲಾಗಿದೆ ಎಂದು ತಿಳಿದುಬಂದಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : General

ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಮೂರನೇ ಜಲಾಂತರ್ಗಾಮಿ ನೌಕೆ ಪ್ರಾಜೆಕ್ಟ್‌ 28ರ ಅಡಿಯಲ್ಲಿ ನಿರ್ಮಾಣಗೊಂಡ ಐಎನ್‌ಎಸ್‌ ಕಿಲ್ತಾನ್‌ ನೌಕೆಯನ್ನು ವಿಶಾಖಪಟ್ಟಣದ ನೌಕಾ ನೆಲೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಾರ್ಪಣೆ ಮಾಡಿದರು.
  • ಆರುಷಿ ಹತ್ಯೆ ಪ್ರಕರಣ: ತಲ್ವಾರ್ ದಂಪತಿಗಳು ಖುಲಾಸೆ;ಅಲಹಾಬಾದ್ ಹೈಕೋರ್ಟ್ ತೀರ್ಪು
  • ಅ.12ರ ಮಧ್ಯ ರಾತ್ರಿಯಿಂದ ಪೆಟ್ರೋಲ್ ಬಂಕ್ ಬಂದ್
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited