Untitled Document
Sign Up | Login    
Dynamic website and Portals
  
June 13, 2016

ಅಮೆರಿಕಾದಲ್ಲಿ ನೈಟ್ ಕ್ಲಬ್ ಮೇಲೆ ಉಗ್ರನ ದಾಳಿ: 50ಕ್ಕೂ ಹೆಚ್ಚು ಮಂದಿ ಸಾವು

ಫ್ಲೋರಿಡಾ : ಉಗ್ರ ದಾಳಿಗೆ ಅಮೆರಿಕ ಮತ್ತೊಮ್ಮೆ ಬೆಚ್ಚಿದೆ. ಫ್ಲೋರಿಡಾದ ಒರ್ಲಾಂಡೋದಲ್ಲಿರುವ ಸಲಿಂಗಿಗಳ ನೈಟ್ ​ಕ್ಲಬ್​ಗೆ ನುಗ್ಗಿದ ಶಂಕಿತ ಇಸ್ಲಾಮಿಕ್ ಉಗ್ರನೊಬ್ಬ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾನೆ. ಪರಿಣಾಮ 50ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, 53 ಜನರು ಗಾಯಗೊಂಡಿದ್ದಾರೆ.

ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಭೀತಿ ಎದುರಾಗಿದೆ. ಈ ಶೂಟೌಟ್‌ ಬಳಿಕ ಒರ್ಲಾಂಡೋದಲ್ಲಿ ತುರ್ತುಸ್ಥಿತಿ ಘೋಷಿಸಲಾಗಿದೆ. ದಾಳಿಕೋರನನ್ನು ಅಫ್ಘಾನಿಸ್ಥಾನ ಮೂಲದ ಅಮೆರಿಕ ಪ್ರಜೆ 29 ವರ್ಷದ ಉಮರ್‌ ಮತೀನ್‌ ಎಂದು ಗುರುತಿಸಲಾಗಿದ್ದು, ಈತ ಕೂಡ ಪೊಲೀಸರ ಪ್ರತಿ ಗುಂಡಿಗೆ ಬಲಿಯಾಗಿದ್ದಾನೆ.

ಬೆಳಗಿನ ಜಾವ 2 ಗಂಟೆಗೆ ಕ್ಲಬ್ ಬಾಗಿಲು ಮುಚ್ಚುವ ಸಂದರ್ಭದಲ್ಲಿ ಆತ್ಮಾಹುತಿ ದಾಳಿಗೆ ಸಿದ್ಧನಾಗಿ ಬಂದಿದ್ದ ಉಗ್ರ ಏಕಾಏಕಿ ಡ್ಯಾನ್ಸ್ ಕೊಠಡಿಯತ್ತ ನುಗ್ಗಿ ಗುಂಡಿನ ದಾಳಿ ನಡೆಸಿದ್ದಾನೆ. ದಿಢೀರ್ ನಡೆದ ಈ ದಾಳಿಯಲ್ಲಿ 50 ಮಂದಿ ಸ್ಥಳದಲ್ಲಿ ಸಾವನ್ನಪ್ಪಿದರೆ 50ಕ್ಕೂ ಹೆಚ್ಚು ಜನರು ಗಾಯಗೊಂಡರು. ಈ ಸಂದರ್ಭದಲ್ಲಿ ಕೆಲವರನ್ನು ಹಂತಕ ಒತ್ತೆಯಾಳಾಗಿಟ್ಟುಕೊಂಡಿದ್ದ ಎನ್ನಲ್ಲಾಗಿದೆ. ಘಟನೆ ನಡೆದ ತಕ್ಷಣವೇ ಸ್ಥಳಕ್ಕೆ ತೆರಳಿದ ಪೊಲೀಸರು 4 ಗಂಟೆಗಳ ಕಾಲ ಗುಂಡಿನ ಕಾಳಗ ನಡೆಸಿ ಹಂತಕನನ್ನು ಹತ್ಯೆಗೈದಿದ್ದಾರೆ.ತತ್‌ಕ್ಷಣಕ್ಕೆ ಇದನ್ನು ಭಯೋತ್ಪಾದನ ಕೃತ್ಯ ಎಂದು ಘೋಷಿಸಲು ಸಾಧ್ಯವಿಲ್ಲವಾದರೂ ಈ ನಿಟ್ಟಿನಲ್ಲಿ ತನಿಖೆ ಮುಂದುವರಿದಿದೆ. ಪ್ರಕರಣದ ಕುರಿತು ಎಫ್ಬಿಐ ಕೂಡ ತನಿಖೆ ಆರಂಭಿಸಿದೆ.

ಉಗ್ರರ ಈ ದಾಳಿ ಕುರಿತು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ, ಹಿಲರಿ ಕ್ಲಿಂಟನ್ ಖಂಡನೆ ವ್ಯಕ್ತಪಡಿಸಿದ್ದಾರೆ

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Crime

ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಬೆಂಗಳೂರಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
  • ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿದ ಎಸ್ ಐ ಟಿ
  • ಸೈನೈಡ್ ಮೋಹನ್ ಗೆ ಜೀವಾವಧಿ ಜೈಲು ಶಿಕ್ಷೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited