Untitled Document
Sign Up | Login    
Dynamic website and Portals
  
June 14, 2016

ದೆಹಲಿ ಸಾರಿಗೆ ಸಚಿವ ಗೋಪಾಲ್ ರೈ ರಾಜೀನಾಮೆ

ಗೋಪಾಲ್ ರೈ ಗೋಪಾಲ್ ರೈ

ನವದೆಹಲಿ : ದೆಹಲಿ ಸಾರಿಗೆ ಇಲಾಖೆಯಲ್ಲಿ ಅವ್ಯವಹಾರ ಆರೋಪ ಕೇಳಿಬಂದ ಹಿನ್ನಲೆಯಲ್ಲಿ ಸಾರಿಗೆ ಆಮ್ ಆದ್ಮಿ ಪಕ್ಷದ ಸಚಿವ ಗೋಪಾಲ್ ರೈ ರಾಜೀನಾಮೆ ನೀಡಿದ್ದಾರೆ.

ಗೋಪಾಲ್ ರೈ ಅವರು ತಮ್ಮ ಕತ್ತಿನಲ್ಲಿ 17 ವರ್ಷಗಳಿಂದ ಇದ್ದ ಬುಲೆಟ್ ತೆಗೆಯಲು ನಡೆದ ಸರ್ಜರಿಯ ಹಿನ್ನೆಲೆಯಲ್ಲಿ ತಮ್ಮನ್ನು ಸಚಿವಾಲಯ ಕರ್ತವ್ಯದಿಂದ ಮುಕ್ತರನ್ನಾಗಿ ಮಾಡುವಂತೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಮನವಿ ಮಾಡಿದ್ದರು ಎಂದು ತಿಳಿದುಬಂದಿದೆ.

ಗೋಪಾಲ್ ರೈ ರಾಜಿನಾಮೆಯಿಂದಾಗಿ ತೆರವಾಗಿರುವ ಸಾರಿಗೆ ಸಚಿವ ಸ್ಥಾನಕ್ಕೆ ಹಾಲಿ ಲೋಕೋಪಯೋಗಿ ಮತ್ತು ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರನ್ನು ನೇಮಕ ಮಾಡಲಾಗುವುದು ಎಂದು ಹೇಳಲಾಗುತ್ತಿದೆ.

ಗೋಪಾಲ್ ರೈ ಅವರು ಆಪ್ ಸರ್ಕಾರದಲ್ಲಿ ಹಲವಾರು ಸಾರಿಗೆ ಯೋಜನೆಗಳನ್ನು ಜಾರಿಗೆ ತರುವಲ್ಲಿ ಪ್ರಮುಖ ಪಾತ್ರಗಳನ್ನು ವಹಿಸಿದ್ದು, ಬೆನ್ನಹುರಿ ಚಿಕಿತ್ಸಾ ಕೇಂದ್ರದಲ್ಲಿ ಅವರು ಫಿಸಿಯೋಥೆರೆಪಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರೈ ಅವರು ಕಾರ್ಮಿಕ ಮತ್ತು ಉದ್ಯೋಗ ಖಾತೆಗಳ ಹೊಣೆಯನ್ನೂ ಹೊಂದಿದ್ದರು. ಶಸ್ತ್ರಚಿಕಿತ್ಸೆ ಬಳಿಕದ ಪರಿಸ್ಥಿತಿಯಲ್ಲಿ ತಮಗೆ ಸಚಿವರಾಗಿ ನಿರ್ವಹಿಸಬೇಕಾದ ಹೊಣೆಗಾರಿಕೆಗೆ ನ್ಯಾಯ ಒದಗಿಸಲಾಗುತ್ತಿಲ್ಲ ಎಂದು ಅವರು ಕೇಜ್ರಿವಾಲ್ ಅವರಿಗೆ ತಿಳಿಸಿದ್ದರು ಎಂದು ಹೇಳಲಾಗಿದೆ.

ಗೋಪಾಲ್ ರೈ ರಾಜೀನಾಮೆಗೆ ಸಾರಿಗೆ ಇಲಾಖೆಯಲ್ಲಿನ ಅವ್ಯವಹಾರ ಆರೋಪ ಕಾರಣ ಎನ್ನಲಾಗುತ್ತಿದೆ. ಆದರೆ ಕೆಲ ಮಾಹಿತಿ ಪ್ರಕಾರಕಳೆದ ಏಪ್ರಿಲ್ ತಿಂಗಳಿನಲ್ಲಿ ದೆಹಲಿಯಲ್ಲಿ ಸಮ-ಬೆಸ ಸಂಖ್ಯೆ ಯೋಜನೆ ಜಾರಿ ಮಾಡುವ ವೇಳೆ ಆ್ಯಪ್ ಮೂಲಕ ಬಸ್ ಸೇವೆ ಒದಗಿಸುವ ನಿಟ್ಟಿನಲ್ಲಿ ದೆಹಲಿ ಸರ್ಕಾರ ಕ್ರಮ ಕೈಗೊಂಡಿತ್ತು. ಈ ವೇಳೆ ಸಾರಿಗೆ ಇಲಾಖೆಯಲ್ಲಿ ವ್ಯಾಪಕ ಅವ್ಯವಹಾರ ನಡೆದಿದೆ ಎಂದು ಆರೋಪಿಸಲಾಗಿತ್ತು. ಅಲ್ಲದೆ ಅವ್ಯವಹಾರದ ನೈತಿಕ ಹೊಣೆಹೊತ್ತು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡುವಂತೆ ಹಲವು ಪ್ರತಿಭಟನೆಗಳು ನಡೆದಿದ್ದವು. ಅಲ್ಲದೆ ಬಿಜೆಪಿ ಶಾಸಕ ವಿಜೇಂದರ್ ಗುಪ್ತಾ ಅವರು ಎಸಿಬಿಗೆ ಈ ಬಗ್ಗೆ ದೂರು ಕೂಡ ನೀಡಿದ್ದರು. ಈ ಹಿನ್ನಲೆಯಲ್ಲಿ ದೆಹಲಿ ಸರ್ಕಾರದ ಈ ಉದ್ದೇಶಿತ ಯೋಜನೆಗೆ ಅನುಮೋದನೆ ನೀಡಲು ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ನಿರಾಕರಿಸಿದ್ದರು. ಈ ಹಿನ್ನಲೆಯಲ್ಲಿ ಯೋಜನೆ ಜಾರಿ ಸಧ್ಯ ಸ್ಥಗಿತಗೊಂಡಿದೆ ಎನ್ನಲಾಗುತ್ತಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited