Untitled Document
Sign Up | Login    
Dynamic website and Portals
  
June 16, 2016

ಕೇಂದ್ರ ಸಚಿವ ಸಂಪುಟ ಪುನಾರಚನೆ ಸಾಧ್ಯತೆ

ನವದೆಹಲಿ : ಜೂ.21ರ ಬಳಿಕ ಕೇಂದ್ರ ಸಚಿವ ಸಂಪುಟ ಪುನಾರಚನೆಯಾಗುವ ಸಾಧ್ಯತೆ ಇದೆ. 2017 ರಲ್ಲಿ ಪಂಜಾಬ್, ಉತ್ತರ ಪ್ರದೇಶ, ಉತ್ತರಾಖಂಡ್, ಗೋವಾ ವಿಧಾನಸಭಾ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ಸಂಪುಟ ಪುನಾರಚನೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಹೊಸ ಪ್ರತಿಭೆಗಳನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಚಿಂತಿಸಿದ್ದು ಉತ್ತರ ಪ್ರದೇಶ, ಪಂಜಾಬ್ ನಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಚಿವ ಸಂಪುಟಕ್ಕೆ ಹೊಸ ಮುಖಗಳು ಪರಿಚಯವಾಗುವ ಸಾಧ್ಯತೆ ಇದೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಶೀಘ್ರವೇ ನಿರ್ಧಾರ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.

ಉತ್ತರ ಪ್ರದೇಶದಿಂದ ಯೋಗಿ ಆದಿತ್ಯನಾಥ್, ಸತ್ಯಪಾಲ್ ಸಿಂಗ್, ರಾಜ್ಯಸಭೆಯ ಸಂಸದ ಶಿವ್ ಪ್ರತಾಪ್ ಶುಕ್ಲಾ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಸಿಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited