Untitled Document
Sign Up | Login    
Dynamic website and Portals
  
June 17, 2016

ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡ ಪ್ರಕರಣ: ತೀರ್ಪು ಪ್ರಕಟ

ಅಹ್ಮದಾಬಾದ್ : 2002ರ ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ 14 ವರ್ಷಗಳ ಸತತ ವಿಚಾರಣೆ ಬಳಿಕ ಅಹ್ಮದಾಬಾದ್ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.

69 ಮಂದಿಯ ಧಾರುಣ ಸಾವಿಗೆ ಕಾರಣವಾಗಿದ್ದ ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡದ 11 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ಉಳಿದ 13 ಅಪರಾಧಿಗಳಿಗೆ ಏಳು ವರ್ಷ ಜೈಲು ಶಿಕ್ಷೆಯನ್ನು ವಿಧಿಸಿ ತೀರ್ಪು ಪ್ರಕಟಿಸಿದೆ.

ದೇಶದ ಗಮನ ಸೆಳೆದಿದ್ದ ಗುಲ್ಬರ್ಗ್ ಹತ್ಯಾಕಾಂಡ ತೀರ್ಪನ್ನು ಅಹ್ಮದಾಬಾದ್ ವಿಶೇಷ ನ್ಯಾಯಾಲಯ ಕಳೆದ ಜೂನ್ 2ರಂದು ಘೋಷಣೆ ಮಾಡಿತ್ತು. ಅದರಂತೆ ಪ್ರಕರಣದಲ್ಲಿ ಬಂಧಿತರಾಗಿದ್ದ 66 ಮಂದಿಯ ಪೈಕಿ 24 ಮಂದಿಯ ಆರೋಪ ಸಾಬೀತಾಗಿದೆ ಎಂದು ಅಹ್ಮದಾಬಾದ್ ವಿಶೇಷ ನ್ಯಾಯಾಲಯದ ಹೇಳಿತ್ತು. ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾ.ಪಿಬಿ ದೇಸಾಯಿ ಅವರು ತಮ್ಮ ಸುಧೀರ್ಘ ತೀರ್ಪು ಪ್ರಕಟಿಸಿದ್ದು, 66 ಮಂದಿ ಆರೋಪಿಗಳ ಪೈಕಿ 24 ಮಂದಿಯ ಆರೋಪ ಸಾಬೀತಾಗಿದೆ. ಈ ಪೈಕಿ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ 36 ಜನರನ್ನು ಖುಲಾಸೆ ಮಾಡಲಾಗಿದ್ದು, 11 ಆರೋಪಿಗಳ ವಿರುದ್ಧದ ಕೊಲೆ ಆರೋಪ ಸಾಬೀತಾಗಿದೆ. ಉಳಿದ 13 ಆರೋಪಿಗಳ ವಿರುದ್ಧ ಇತರೆ ಆರೋಪಗಳು ಸಾಬೀತಾಗಿದೆ ಎಂದು ತೀರ್ಪು ನೀಡಿದ್ದರು.

ಜೂನ್ 2ರಂದು ಗೋದ್ರೋತ್ತರ ಘರ್ಷಣೆ ವೇಳೆ ನಡೆದಿದ್ದ ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡ ಪ್ರಕರಣ ಸಂಬಂಧ ಅಹ್ಮದಾಬಾದ್ ವಿಶೇಷ ನ್ಯಾಯಾಲಯ 24 ಮಂದಿ ತಪ್ಪಿತಸ್ಥರು ಎಂದು ತೀರ್ಪು ನೀಡಿತ್ತಾದರೂ, ಪ್ರಾಸಿಕ್ಯೂಷನ್ ಮತ್ತು ಡಿಫೆನ್ಸ್ ವಕೀಲರ ವಾದ-ಪ್ರತಿವಾದಗಳಿಂದಾಗಿ ಸತತ ಮೂರು ಬಾರಿ ನ್ಯಾಯಾಲಯ ಅಪರಾಧಿಗಳ ಶಿಕ್ಷೆ ಪ್ರಮಾಣ ಘೋಷಣೆಯನ್ನು ಮುಂದೂಡಿತ್ತು. ಕಳೆದ ಜೂನ್ 13ರಂದು ನಡೆದ ವಿಚಾರಣೆಯಲ್ಲಿ ನ್ಯಾಯಾಲಯ ಜೂನ್ 17ರಂದು ಶಿಕ್ಷೆ ಪ್ರಮಾಣ ಘೋಷಣೆ ಮಾಡುವುದಾಗಿ ತಿಳಿಸಿತ್ತು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited