Untitled Document
Sign Up | Login    
Dynamic website and Portals
  
June 19, 2016

ಸಚಿವ ಸಂಪುಟದಿಂದ ಅಂಬರೀಶ್ ಕೈಬಿಡುವ ಸಾಧ್ಯತೆ: ಅಭಿಮಾನಿಯಿಂದ ಆತ್ಮಹತ್ಯೆ ಯತ್ನ

ಬೆಂಗಳೂರು : ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸಮ್ಮತಿ ಸೂಚಿಸುತ್ತಿದ್ದಂತೆಯೇ ಸಂಪುಟದಿಂದ ಕೈ ಬಿಡಲಾಗಿರುವ ಹಲವು ಸಚಿವರುಗಳ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದಾರೆ.

ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸುವುದಕ್ಕೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆಯೇ ಸಂಪುಟದಿಂದ ಕೈಬಿಡಲಾಗುವ ಸಚಿವರ ಅಭಿಮಾನಿಗಳು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದಾರೆ. ಈ ಮೂಲಕ ರಾಜ್ಯ ಕಾಂಗ್ರೆಸ್ ನಲ್ಲಿ ಅಸಮಾಧಾನ ಭುಗಿಲೆದ್ದಿದೆ.

ವಸತಿ ಖಾತೆ ಸಚಿವ, ನಟ ಅಂಬರೀಶ್ ಅವರನ್ನು ಸಚಿವ ಸಂಪುಟದಿಂದ ಕೈಬಿಡಬಾರದೆಂದು ಆಗ್ರಹಿಸಿ ಮಂಡ್ಯದ ಸಂಜಯ್ ವೃತ್ತದಲ್ಲಿ ಅಂಬಿ ಅಭಿಮಾನಿಯೊಬ್ಬರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ್ದ ಸಿಎಂ ದ್ಯಾವಪ್ಪ ಅವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ರಕ್ಷಿಸಿದ್ದಾರೆ.

ಸಚಿವ ಸಂಪುಟದಿಂದ ಅಂಬರೀಶ್ ಅವರನ್ನು ಕೈಬಿಡಬಾರದೆಂದು ಚಲನಚಿತ್ರರಂಗ ಒತ್ತಾಯಿಸಿದೆ. ಹಾಗಾಗಿ ನಾಳೆ ಚಿತ್ರರಂಗವನ್ನು ಬಂದ್ ಮಾಡಲು ಸ್ಯಾಂಡಲ್ ವುಡ್ ನಿರ್ಧರಿಸಿದೆ.

ಶಿವರಾಜ್ ತಂಗಡಿಯನ್ನು ಸಚಿವ ಸಂಪುಟದಿಂದ ಕೈಬಿಟ್ಟಿದ್ದಕ್ಕೆ, ತಂಗಡಿ ಅಭಿಮಾನಿಗಳು, ಕಾರ್ಯಕರ್ತರು ಕೊಪ್ಪಳ ಜಿಲ್ಲೆ ಗಂಗಾವತಿಯ ಸಿದ್ದಾಪುರದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಕೊನೆಯ ಕ್ಷಣದಲ್ಲಿ ಸಚಿವ ಸ್ಥಾನ ಕೈ ತಪ್ಪಿದ ಕಾರಣ ವಿಜಯನಗರ ಶಾಸಕ ಎಂ ಕೃಷ್ಣಪ್ಪ ಅವರ ಬೆಂಬಲಿಗರು ವ್ಯಾಪಕ ಪ್ರತಿಭಟನೆಯಲ್ಲಿ ತೊಡಗಿದ್ದಾರೆ. ರಸ್ತೆಯಲ್ಲಿ ಟೈಯರ್ ಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Protest

ಕೆ ಎಸ್ ಒಯು ಮುಚ್ಚದಂತೆ ಎಬಿವಿಪಿ ಪ್ರತಿಭಟನೆ: ಲಘು ಲಾಠಿ ಪ್ರಹಾರ
  • ಕೆ ಎಸ್ ಒಯು ಮುಚ್ಚದಂತೆ ಎಬಿವಿಪಿ ಪ್ರತಿಭಟನೆ: ಲಘು ಲಾಠಿ ಪ್ರಹಾರ
  • ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವನ್ನು ಮುಚ್ಚಲು ಮುಂದಾಗಿರುವ ಸರ್ಕಾರದ ಕ್ರಮ ಖಂಡಿಸಿ ಎಬಿವಿಪಿ ಬೃಹತ್ ಪ್ರತಿಭಟನೆ ಅರಂಭಿಸಿದ್ದು, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.
  • ದೇಶವ್ಯಾಪಿ ಪೆಟ್ರೋಲ್ ಬಂಕ್ ಮುಷ್ಕರ ವಾಪಸ್
  • ಸಿಪಿಎಂ ಕಛೇರಿಗೆ ಮುತ್ತಿಗೆ: ಬಿ ಎಸ್ ಯಡಿಯೂರಪ್ಪ ಸೇರಿದಂತೆ ಹಲವರ ಬಂಧನ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited