Untitled Document
Sign Up | Login    
Dynamic website and Portals
  
June 20, 2016

ಆಫ್ಘಾನಿಸ್ಥಾನದ ಕಾಬೂಲ್ ನಲ್ಲ್ಲಿ ಆತ್ಮಾಹತ್ಯಾ ಬಾಂಬ್ ದಾಳಿ: 14 ಜನರು ಸಾವು

ಕಾಬೂಲ್ : ಆಪ್ಘಾನಿಸ್ಥಾನದ ರಾಜಧಾನಿ ಕಾಬುಲ್ ನಲ್ಲಿ ಭದ್ರಾತಾ ಪಡೆ ಸಿಬ್ಬಂದಿ ಪ್ರಯಾಣಿಸುತ್ತಿದ್ದ ಮಿನಿ ಬಸ್ ಮೇಲೆ ಆತ್ಮಾಹುತಿ ಬಾಂಬ್ ದಾಳಿ ನಡೆದಿದೆ. ಘಟನೆಯಲ್ಲಿ 14 ಜನ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಭದ್ರಾತಾ ಪಡೆ ಸಿಬ್ಬಂದಿ ಪ್ರಯಾಣಿಸುತ್ತಿದ್ದ ಮಿನಿ ಬಸ್ ಇದಾಗಿದ್ದು, ಇದಕ್ಕೆ ಆತ್ಮಹತ್ಯಾ ಬಾಂಬ್ ಇರಿಸಿದ್ದ ಕಾರ್ ಢಿಕ್ಕಿ ಹೊಡೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಘಟನೆಯಲ್ಲಿ 14 ಜನ ಮೃತಪಟ್ಟಿದ್ದು, ಹಲವು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಳಗ್ಗೆ ಸುಮಾರು 6:30 ಕ್ಕೆ ಬಸ್ಸು ಜನನಿಬಿಡ ಪ್ರದೇಶ ಪುಲ್-ಎ-ಚರ್ಕಿ ಬಳಿ ಚಲಿಸುತ್ತಿದ್ದಾಗ, ಸ್ಫೋಟಕಗಳನ್ನು ಹೊತ್ತಿದ್ದ ಕಾರು ಬಸ್ಸಿಗೆ ಢಿಕ್ಕಿ ಹೊಡೆದು ಭಾರಿ ಸ್ಫೋಟ ಉಂಟಾಗಿದೆ. ಮೃತಪಟ್ಟವರಲ್ಲಿ ಬಹುತೇಕರು ಬಸ್ಸಿನಲ್ಲಿದ್ದ ವಿದೇಶಿ ಭದ್ರತಾ ಸಿಬ್ಬಂದಿಯಾಗಿದ್ದು, ನೇಪಾಳ ಮೂಲದವರು ಎನ್ನಲಾಗಿದೆ.

ಇತ್ತೀಚೆಗೆ ಕಾಬೂಲ್ ನಲ್ಲಿ ಉಗ್ರರ ದಾಳಿ ಹೆಚ್ಚಾಗಿದ್ದು, ಈ ರೀತಿ ದಾಳಿಗೆ 6 ಜನ ತಾಲಿಬಾನ್ ಉಗ್ರರಿಗೆ ಮರಣದಂಡನೆ ವಿಧಿಸಿರುವುದೇ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Crime

ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಬೆಂಗಳೂರಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
  • ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿದ ಎಸ್ ಐ ಟಿ
  • ಸೈನೈಡ್ ಮೋಹನ್ ಗೆ ಜೀವಾವಧಿ ಜೈಲು ಶಿಕ್ಷೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited