Untitled Document
Sign Up | Login    
Dynamic website and Portals
  
June 21, 2016

ಬೆಂಗಳೂರಿನಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಸಿಎಂ ಚಾಲನೆ

ಬೆಂಗಳೂರು : ಯೋಗ ಬಲ್ಲವನಿಗೆ ರೋಗವಿಲ್ಲ ಎಂದರೂ ತಪ್ಪೇನಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಯೋಗದ ಮಹತ್ವವನ್ನು ತಿಳಿಸಿದ್ದಾರೆ

2ನೇ ಅಂತಾರಾಷ್ಟ್ರೀಯ ಯೋಗದಿನದ ಅಂಗವಾಗಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಶ್ವಾಸಗುರು ವಚನಾನಂದ ಸ್ವಾಮಿಜಿ ನೇತೃತ್ವದಲ್ಲಿ ನಡೆದ ಯೋಗ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ಪ್ರತಿನಿತ್ಯ ಯೋಗ ಮಾಡುವುದರಿಂದ ಚೈತನ್ಯ ಬರುತ್ತದೆ ಹಾಗೂ ಆರೋಗ್ಯ ಸಮಸ್ಯೆಗಳು ದೂರವಾಗಲಿವೆ ಎಂದರು. ಯೋಗವನ್ನು ಎಲ್ಲರೂ ಮಾಡಬೇಕು. ಮಧುಮೇಹ ನಿಯಂತ್ರಣಕ್ಕೆ ಯೋಗ ಅತ್ಯಂತ ಸಹಕಾರಿಯಾಗಿದೆ ಎಂದು ತಿಳಿಸಿದರು.

ಯೋಗ ಭಾರತೀಯ ಸಂಸ್ಕೃತಿಯ ಪ್ರಾಚೀನ ಕೊಡುಗೆ. ಊಟ ಬಲ್ಲವನಿಗೆ ರೋಗವಿಲ್ಲ ಎಂಬ ಮಾತು ನಮ್ಮಲ್ಲಿದೆ. ಆದರೆ ಯೋಗ ಬಲ್ಲವನಿಗೆ ರೋಗವಿಲ್ಲ ಎಂದರೂ ತಪ್ಪೇನೂ ಇಲ್ಲ. ಸರಿಯಾದ ರೀತಿಯಲ್ಲಿ ಯೋಗವನ್ನು ರೂಢಿಸಿಕೊಂಡಲ್ಲಿ ಆರೋಗ್ಯ ವೃದ್ಧಿಯಾಗಲಿದೆ. ಈ ನಿಟ್ಟಿನಲ್ಲಿ ಇತ್ತೀಚಿನ ದಿನಗಳಿಂದ ನಾನೂ ಕೂಡ ಯೋಗಾಸನಗಳನ್ನು ಮಾಡುತ್ತಿದ್ದೇನೆ ಎಂದರು.

ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿವಿಧ ಆಸನಗಳನ್ನು ಮಾಡಿದರು. ಕಾರ್ಯಕ್ರಮದಲ್ಲಿ ಬಾಲಿವುಡ್ ನಟಿ ಬಿಪಾಶಾ ಬಸು, ಕೇಂದ್ರ ಸಚಿವರಾದ ಅನಂತಕುಮಾರ್, ಡಿ.ವಿ.ಸದಾನಂದ ಗೌಡ, ಆರೋಗ್ಯ ಸಚಿವ ಯು.ಟಿ.ಖಾದರ್, ಸಚಿವರಾದ ರೋಷನ್ ಬೇಗ್, ಟಿ.ಬಿ.ಜಯಚಂದ್ರ, ಡಿ.ಕೆ.ಶಿವಕುಮಾರ್, ಕೆ.ಜೆ.ಜಾರ್ಜ್ ಸೇರಿದಂತೆ ಹಲವು ಜನಪ್ರತಿನಿಧಿಗಳು ಉಪಸ್ಥಿತರಿದ್ದು, ಯೋಗಾಸನಗಳ ಮಾಡಿದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Event

ಗೋಮಾತೆಯ ಸಂಚಾರಕ್ಕೆ ಪ್ಲಾಸ್ಟಿಕ್ ಮುಕ್ತ ಪರಿಸರ:  ಸ್ವಚ್ಚತಾ ಅಭಿಯಾನ
  • ಗೋಮಾತೆಯ ಸಂಚಾರಕ್ಕೆ ಪ್ಲಾಸ್ಟಿಕ್ ಮುಕ್ತ ಪರಿಸರ: ಸ್ವಚ್ಚತಾ ಅಭಿಯಾನ
  • 'ಗೋಮಾತೆಯ ಸಂಚಾರಕ್ಕೆ ಪ್ಲಾಸ್ಟಿಕ್ ಮುಕ್ತ ಪರಿಸರ' ಎಂಬ ಉದ್ದೇಶದೊಂದಿಗೆ ಸಾಮಾಜಿಕ ಸೇವಾ ಸಂಘಟನೆಯಾದ 'ರಾಘವ ಸೇನೆ'ಯ ವತಿಯಿಂದ ಸ್ವಚ್ಚತಾ ಅಭಿಯಾನ ನಡೆಯಿತು.
  • ಯೋಧರಿಗೆ ರಾಖಿಕಟ್ಟಿ ರಕ್ಷಾ ಬಂಧನ ಆಚರಿಸಿದ ಸಚಿವೆ ಸ್ಮೃತಿ ಇರಾನಿ
  • 70ನೇ ಸ್ವಾತಂತ್ರ್ಯದಿನಾಚರಣೆ: ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited