Untitled Document
Sign Up | Login    
Dynamic website and Portals
  
June 22, 2016

ಪಠಾಣ್‌ಕೋಟ್‌ ವಾಯುನೆಲೆ ಮೇಲೆ ಮತ್ತೆ ಉಗ್ರರ ದಾಳಿ ಸಾಧ್ಯತೆ: ಕಟ್ಟೆಚ್ಚರ

ನವದೆಹಲಿ : ಪಠಾಣ್‌ಕೋಟ್‌ ವಾಯುನೆಲೆಯ ಸಮೀಪವಿರುವ ಹಳ್ಳಿಗಳಲ್ಲಿ ಉಗ್ರರು ಅಡಗಿಕೊಂಡಿದ್ದು, ಪಠಾಣ್‌ಕೋಟ್‌ ವಾಯು ನೆಲೆಯ ಮೇಲೆ ದಾಳಿ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಈ ಕುರಿತು ಕೇಂದ್ರ ಗೃಹ ಸಚಿವಾಲಯದ ಸಂಸದೀಯ ಸ್ಥಾಯಿ ಸಮಿತಿ ಎಚ್ಚರಿಕೆ ನೀಡಿದೆ. ಈ ಬಗ್ಗೆ ಸರ್ಕಾರಕ್ಕೆ ಮಾಹಿತಿ ನಿಡಲಾಗಿದ್ದು, ಭದ್ರತೆ ಹೆಚ್ಚಿಸಲಾಗಿದೆ ಎಂದು ಸಮಿತಿ ತಿಳಿಸಿದೆ.

ಜಮ್ಮುವಿನ ಅಂತಾರಾಷ್ಟ್ರೀಯ ಗಡಿ ಬಳಿ ಸಮಿತಿ ಭದ್ರತಾ ಕ್ರಮಗಳನ್ನು ಪರಿಶೀಲಿಸುತ್ತಿರುವ ಸಮಿತಿ, ಅದಕ್ಕೂ ಮುನ್ನ ಪಠಾಣ್​ಕೋಟ್​ಗೆ ತೆರಳಿ ಪರಿಶೀಲನೆ ನಡೆಸಿತ್ತು. ‘ಕೆಲ ಉಗ್ರರು ಹಳ್ಳಿಯಲ್ಲಿ ಅಡಗಿರುವುದಾಗಿ ಸ್ಥಳೀಯರು ನಮಗೆ ಮಾಹಿತಿ ನೀಡಿದ್ದಾರೆ. ಅದರ ಆಧಾರದಲ್ಲಿ ನಾವು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದೇವೆ’ ಎಂದು ಸಂಸದೀಯ ಸ್ಥಾಯಿ ಸಮಿತಿ ಅಧ್ಯಕ್ಷ ಪಿ. ಭಟ್ಟಾಚಾರ್ಯ ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಪಠಾಣ್​ಕೋಟ್​ನ ಆಯಕಟ್ಟಿನ ಪ್ರದೇಶಗಳಲ್ಲಿ ಸಿಆರ್​ಪಿಎಫ್, ಬಿಎಸ್​ಎಫ್ ಮತ್ತು ಸೇನಾ ತುಕಡಿಗಳನ್ನು ನಿಯೋಜಿಸಲಾಗಿದ್ದು, ಕಟ್ಟೆಚ್ಚರ ವಹಿಸಲಾಗಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : General

ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಮೂರನೇ ಜಲಾಂತರ್ಗಾಮಿ ನೌಕೆ ಪ್ರಾಜೆಕ್ಟ್‌ 28ರ ಅಡಿಯಲ್ಲಿ ನಿರ್ಮಾಣಗೊಂಡ ಐಎನ್‌ಎಸ್‌ ಕಿಲ್ತಾನ್‌ ನೌಕೆಯನ್ನು ವಿಶಾಖಪಟ್ಟಣದ ನೌಕಾ ನೆಲೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಾರ್ಪಣೆ ಮಾಡಿದರು.
  • ಆರುಷಿ ಹತ್ಯೆ ಪ್ರಕರಣ: ತಲ್ವಾರ್ ದಂಪತಿಗಳು ಖುಲಾಸೆ;ಅಲಹಾಬಾದ್ ಹೈಕೋರ್ಟ್ ತೀರ್ಪು
  • ಅ.12ರ ಮಧ್ಯ ರಾತ್ರಿಯಿಂದ ಪೆಟ್ರೋಲ್ ಬಂಕ್ ಬಂದ್
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited