Untitled Document
Sign Up | Login    
Dynamic website and Portals
  
June 23, 2016

ತಾಷ್ಕೆಂಟ್ ನಲ್ಲಿ ಪ್ರಧಾನಿ ಮೋದಿ-ಚೀನಾ ಅಧ್ಯಕ್ಷ ಕ್ಸಿ ಜಿನ್​ ಪಿಂಗ್ ಭೇಟಿ

ತಾಷ್ಕೆಂಟ್ ನಲ್ಲಿ ಪ್ರಧಾನಿ ಮೋದಿ-ಚೀನಾ ಅಧ್ಯಕ್ಷ ಕ್ಸಿ ಜಿನ್​ ಪಿಂಗ್ ಭೇಟಿ

ತಾಷ್ಕೆಂಟ್ : ಭಾರತದ ಪರಮಾಣು ಪೂರೈಕೆದಾರರ ಒಕ್ಕೂಟ ಸೇರ್ಪಡೆ(ಎನ್​ಎಸ್​ಜಿ) ವಿಚಾರದಲ್ಲಿ ಚೀನಾ ರಚನಾತ್ಮಕ ಪಾತ್ರವಹಿಸುವುದಾಗಿ ಹೇಳಿದೆ. ಈ ಮೂಲಕ ಭಾರತದ ಕನಸು ನನಸಾಗುವ ಕಾಲ ಸನ್ನಿಹತವಾಗಿದೆ.

ಉಜ್ಬೆಕಿಸ್ತಾನದ ರಾಜಧಾನಿ ತಾಷ್ಕೆಂಟ್​ ನಲ್ಲಿ ಇಂದು ಆರಂಭವಾಗುವ ಶಾಂಘೈ ಸಹಕಾರ ಸಂಘಟನೆಯ (ಎಸ್​ಸಿಒ) ಶೃಂಗಸಭೆ ಸಂದರ್ಭದಲ್ಲಿ ಚೀನಾ ಅಧ್ಯಕ್ಷ ಕ್ಷಿ ಜಿನ್​ಪಿಂಗ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಪರಸ್ಪರ ಮಾತುಕತೆ ನಡೆಸಲಿದ್ದಾರೆ. ಈ ವೇಳೆ ಭಾರತವು ಎನ್​ಎಸ್​ಜಿ ಸದಸ್ಯತ್ವ ಪಡೆಯುವ ತನ್ನ ಯತ್ನಕ್ಕೆ ಚೀನಾಬೆಂಬಲ ಕೋರುವ ನಿರೀಕ್ಷೆ ಇದೆ.

ಈ ಬಗ್ಗೆ ಮಾತನಾಡಿರುವ ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರ ಹುವಾ ಚುನಿಯಿಂಗ್ ಅವರು, ಭಾರತ ಮತ್ತು ಪಾಕಿಸ್ತಾನಕ್ಕೆ ಒಕ್ಕೂಟದ ಸದಸ್ಯತ್ವ ನೀಡುವ ಸಂಬಂಧ ಎನ್​ಎಸ್​ಜಿ ಸದಸ್ಯರು ಮೂರು ಸುತ್ತಿನ ಅನಧಿಕೃತ ಮಾತುಕತೆಗಳನ್ನು ನಡೆಸಿದ್ದಾರೆ ಎಂದು ತಿಳಿಸಿದ್ದಾರೆ. ಅಲ್ಲದೆ ಈ ವಿಚಾರದಲ್ಲಿ ಚೀನಾ ರಚನಾತ್ಮಕ ಪಾತ್ರ ನಿರ್ವಹಿಸಲಿದೆ ಎಂದು ಹೇಳಿದ್ದಾರೆ.

ತಾಷ್ಕೆಂಟ್​ ನಲ್ಲಿ ನಡೆಯಲಿರುವ ಶೃಂಗಸಭೆಯ ಸಂದರ್ಭದಲ್ಲಿ ಉಭಯ ನಾಯಕರು ಸಭೆ ನಡೆಸಲಿದ್ದಾರೆ. ಕ್ಷಿ ಜಿನ್​ಪಿಂಗ್ ಜೊತೆಗಿನ ಮಾತುಕತೆ ವೇಳೆಯಲ್ಲಿ ಮೋದಿಯವರು ಪರಮಾಣು ಪೂರೈಕೆದಾರರ ಸಮೂಹದ (ಎನ್​ಎಸ್​ಜಿ) ಸದಸ್ಯತ್ವ ಪಡೆಯುವ ಭಾರತದ ಯತ್ನಕ್ಕೆ ಚೀನಾಬೆಂಬಲ ಕೋರಲಿದ್ದು, ಚೀನಾವು ಧನಾತ್ಮಕ ಪಾತ್ರ ವಹಿಸಲಿದೆ ಎಂದು ನಿರೀಕ್ಷಿಸಲಾಗಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited