Untitled Document
Sign Up | Login    
Dynamic website and Portals
  
June 23, 2016

ತಾಷ್ಕೆಂಟ್ ತಲುಪಿದ ಪ್ರಧಾನಿ ನರೇಂದ್ರ ಮೋದಿ

ತಾಷ್ಕೆಂಟ್ : ಶಾಂಘೈ ಕೋ ಆಪರೇಷನ್ ಆರ್ಗನೈಜೇಷನ್ (ಎಸ್​ಸಿಒ) ಶೃಂಗ ಸಭೆಯಲ್ಲಿ ಭಾಗವಹಿಸಿರುವ ಪ್ರಧಾನಿ ನರೇಂದ್ರ ಮೋದಿ, ತಾಷ್ಕೆಂಟ್ ತಲುಪಿದ್ದಾರೆ.

ಎಸ್​ಸಿಒ ಶೃಂಗಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಬೆಳಗ್ಗೆ ನವದೆಹಲಿಯಿಂದ ಹೊರಟಿರುವ ಪ್ರಧಾನಿ ಮೋದಿ ಉಜ್ಬೆಕಿಸ್ತಾನದ ರಾಜಧಾನಿ ತಾಷ್ಕೆಂಟ್ ತಲುಪಿದ್ದಾರೆ. ಉಜ್ಬೆಕ್ ಪ್ರಧಾನಿ ಶವಕತ್ ಮಿರ್ಜಿಯೊಯೆವ್ ಅವರು ವಿಮಾನ ನಿಲ್ದಾಣದಲ್ಲಿ ಮೋದಿ ಅವರನ್ನು ಅಭೂತಪೂರ್ವವಾಗಿ ಸ್ವಾಗತಿಸಿದರು.ಎರಡು ದಿನಗಳ ಕಾಲ ನಡೆಯುವ ಸಭೆಯ ಕಾಲದಲ್ಲಿ ಚೀನಾ ಸೇರಿದಂತೆ ವಿವಿಧ ರಾಷ್ಟ್ರಗಳ ಮುಖಂಡರನ್ನು ಮೋದಿ ಭೇಟಿ ಮಾಡಲಿದ್ದಾರೆ.

ಈ ನಡುವೆ ತಾಷ್ಕೆಂಟ್ ತಲುಪಿರುವ ಪ್ರಧಾನಿ ಮೋದಿ, ಚೀನಾ ಅಧ್ಯಕ್ಷ ಕ್ಷಿ ಜಿನ್​ಪಿಂಗ್ ಅವರನ್ನು ಭೇಟಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಎನ್​ಎಸ್​ಜಿ ಸದಸ್ಯತ್ವ ಪಡೆಯವ ನಿಟ್ಟಿನಲ್ಲಿ ಉಭಯ ನಾಯಕರ ನಡುವೆ ಚರ್ಚೆ ನಡೆಯಲಿರುವುದು ವಿಶೇಷ ಮಹತ್ವ ಪಡೆದಿದೆ.

ಎನ್ ಎಸ್ ಜಿ ಸದಸ್ಯತ್ವ ಪಡೆಯಲು ಮತ್ತು ಇದರಿಂದ ಉತ್ತಮ ಫಲಿತಾಂಶ ದೊರಕುವಂತಾಗಲು ಶೃಂಗ ಸಭೆಯಲ್ಲಿ ಭಾರತ ಸಕ್ರಿಯವಾಗಿ ಭಾಗಿಯಾಗಲಿದೆ. ಮಧ್ಯಏಷ್ಯಾದ ರಾಷ್ಟ್ರಗಳೊಂದಿಗೆ ಸೌಹಾರ್ದ ಸಂಬಂಧ ಬೆಳೆಸಿಕೊಳ್ಳಲು ಭಾರತ ಉತ್ಸುಕವಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ.

ಸಿಯೋಲ್​ನಲ್ಲಿ ಆರಂಭಗೊಂಡಿರುವ ಪರಮಾಣು ಪೂರೈಕೆದಾರರ ಸಮೂಹದ (ಎನ್​ಎಸ್​ಜಿ) ನಿರ್ಣಾಯಕ ಸಭೆಯಲ್ಲಿ ಭಾರತಕ್ಕೆ ಸಮೂಹದ ಸದಸ್ಯತ್ವ ನೀಡುವ ವಿಚಾರದ ಕುರಿತು ಚರ್ಚೆ ನಡೆಯಲಿದೆ. 48 ರಾಷ್ಟ್ರಗಳು ಸದಸ್ಯತ್ವ ಹೊಂದಿರುವ ಪರಮಾಣು ಕ್ಲಬ್ ಸದಸ್ಯತ್ವಕ್ಕೆ ಭಾರತ ಮತ್ತು ಪಾಕಿಸ್ತಾನ ಅರ್ಜಿ ಸಲ್ಲಿಸಿವೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited