Untitled Document
Sign Up | Login    
Dynamic website and Portals
  
June 29, 2016

ಕೇಂದ್ರ ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಬಂಪರ್ ಕೊಡುಗೆ

ನವದೆಹಲಿ : ಕೇಂದ್ರ ಸರ್ಕಾರಿ ನೌಕರರು, ಪಿಂಚಣಿದಾರರು ನಿರೀಕ್ಷಿಸುತ್ತಿರುವ 7ನೇ ವೇತನ ಆಯೋಗದ ಶಿಫಾರಸುಗಳಿಗೆ ಕೇಂದ್ರ ಸಚಿವ ಸಂಪುಟ ಸಮ್ಮತಿ ಸೂಚಿಸಿದೆ. ಈ ಮೂಲಕ ಬಂಪರ್ ಕೊಡುಗೆ ನೀಡಿದೆ.

ಈ ಮೂಲಕ ಸರಾಸರಿ ಶೇ.23.55ರಷ್ಟು ವೇತನವನ್ನು ಹೆಚ್ಚಳ ಮಾಡಲಾಗಿದೆ. ಇದರಿಂದಾಗಿ 48 ಲಕ್ಷ ಕೇಂದ್ರ ನೌಕರರು, 55 ಲಕ್ಷ ನಿವೃತ್ತ ನೌಕರರಿಗೆ ವೇತನ ಹೆಚ್ಚಳದ ಲಾಭವಾದಂತಾಗಿದೆ. ಆದರೆ ಕೇಂದ್ರದ ಬೊಕ್ಕಸದ ಮೇಲೆ 1.02 ಲಕ್ಷ ಕೋಟಿ ರೂಪಾಯಿ ಹೊರೆ ಬೀಳಲಿದೆ.

ಜನವರಿ 1ರಿಂದಲೇ ಪೂರ್ವಾನ್ವಯವಾಗುವಂತೆ ಕೇಂದ್ರ ಸರ್ಕಾರಿ ನೌಕರರ ವೇತನ, ಪಿಂಚಣಿಯನ್ನು ಹೆಚ್ಚಳವಾಗುವಂತೆ ಶಿಫಾರಸನ್ನು ಅಂಗೀಕರಿಸಲಾಗಿದೆ.

ವರದಿ ಪ್ರಕಾರ, ಕೇಂದ್ರ ಸಚಿವ ಸಂಪುಟದ 7ನೇ ವೇತನ ಆಯೋಗದ ಶಿಫಾರಸನ್ನು ಅಂಗೀಕರಿಸಿದ್ದರಿಂದ ಭಾರತೀಯ ಸೇನೆಗೆ ಹೆಚ್ಚಿನ ಅನುಕೂಲವಾಗಿದೆ. ಆರ್ಮಿಯವರಿಗೆ ಪ್ರಸ್ತುತ 21,000 ಸಾವಿರ ವೇತನ ಸಿಗುತ್ತಿತ್ತು. ಇನ್ಮುಂದೆ ಅದು 31,500 ರೂಪಾಯಿಗೆ ಏರಿಕೆಯಾಗಲಿದೆ.

ನ್ಯಾಯಮೂರ್ತಿ ಎ.ಕೆ. ಮಾಥುರ್ ನೇತೃತ್ವದ 7 ನೇ ವೇತನ ಆಯೋಗವು 900 ಪುಟಗಳ ವರದಿಯನ್ನು 2015 ರ ನವೆಂಬರ್​ನಲ್ಲಿ ವಿತ್ತ ಸಚಿವ ಅರುಣ್ ಜೇಟ್ಲಿ ಅವರಿಗೆ ಸಲ್ಲಿಸಿತ್ತು. ವರದಿಯ ಪರಿಶೀಲನೆಗೆ ಸಂಪುಟ ಕಾರ್ಯದರ್ಶಿ ಪಿ ಕೆ ಸಿನ್ಹಾ ನೇತೃತ್ವದಲ್ಲಿ ಉನ್ನತಾಧಿಕಾರ ಸಲಹಾ ಸಮಿತಿ ರಚಿಸಲಾಗಿತ್ತು.

ಸಿನ್ಹಾರ ವೇತನ ಸಲಹಾ ಸಮಿತಿ ಸಲ್ಲಿಸಿದ ವರದಿ ಆಧರಿಸಿ 7 ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸುವ ಕುರಿತು ಇಂದಿನ ಸಂಪುಟವು ಚರ್ಚಿಸಿ ಬಳಿಕ ಒಪ್ಪಿಗೆ ನೀಡಿತು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : General

ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಮೂರನೇ ಜಲಾಂತರ್ಗಾಮಿ ನೌಕೆ ಪ್ರಾಜೆಕ್ಟ್‌ 28ರ ಅಡಿಯಲ್ಲಿ ನಿರ್ಮಾಣಗೊಂಡ ಐಎನ್‌ಎಸ್‌ ಕಿಲ್ತಾನ್‌ ನೌಕೆಯನ್ನು ವಿಶಾಖಪಟ್ಟಣದ ನೌಕಾ ನೆಲೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಾರ್ಪಣೆ ಮಾಡಿದರು.
  • ಆರುಷಿ ಹತ್ಯೆ ಪ್ರಕರಣ: ತಲ್ವಾರ್ ದಂಪತಿಗಳು ಖುಲಾಸೆ;ಅಲಹಾಬಾದ್ ಹೈಕೋರ್ಟ್ ತೀರ್ಪು
  • ಅ.12ರ ಮಧ್ಯ ರಾತ್ರಿಯಿಂದ ಪೆಟ್ರೋಲ್ ಬಂಕ್ ಬಂದ್
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited