Untitled Document
Sign Up | Login    
Dynamic website and Portals
  
July 1, 2016

ಉತ್ತರಾಖಂಡದಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ಥ

ಡೆಹ್ರಾಡೂನ್ : ಉತ್ತರಾಖಂಡದಲ್ಲಿ ಮತ್ತೆ ಮೇಘಸ್ಫೋಟ ಸಂಭವಿಸಿದ್ದು, ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ

ಛಮೋಲಿ ಹಾಗೂ ಪಿಥೋರ್ ಘಡದಲ್ಲಿ ಸಂಭವಿಸಿದ ಮಳೆ ಮತ್ತು ಪ್ರವಾಹದಿಂದಾಗಿ ಈ ವರೆಗೂ 30ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಸುಮಾರು 25ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಮಂದಾಕಿನಿ ನದಿಯ ದಡದ ಸಮೀಪವಿರುವ ಹಲವು ಮನೆಗಳು ಈಗಾಗಲೇ ಜಲಾವೃತವಾಗಿವೆ. ಗೋಪೇಶ್ವರದಲ್ಲಿರುವ ಹಲವು ಮನೆಗಳಿಗೆ ನೀರು ನುಗ್ಗಿದ್ದು ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ರಾಜ್ಯದಲ್ಲಿರುವ ಎಲ್ಲಾ ನದಿಗಳ ನೀರಿನ ಪ್ರಮಾಣ ಈಗಾಗಲೇ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.

ಪಿಥೋರ್ ಘಡ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿದ ಪರಿಣಾಮ ರಸ್ತೆ ಸಂಚಾರ ಅಸ್ಥವ್ಯಸ್ಥವಾಗಿದ್ದು, ಪಿಥೋರ್ ಘಡ ಮತ್ತು ಯಮುನೋತ್ರಿ ಸಂಪರ್ಕಿಸುವ ರಸ್ತೆ ಸಂಪೂರ್ಣ ಸ್ಥಗಿತವಾಗಿದೆ.

ಭೂಕುಸಿತದಲ್ಲಿ ಹಲುವ ಮನೆಗಳು ಕುಸಿದಿದ್ದು, ಅಪಾಯದಲ್ಲಿ ಸಿಲುಕಿರುವ ನೂರಾರು ನಾಗರಿಕನ್ನು ಸುರಕ್ಷಿತ ಪ್ರದೇಶಗಳಿಗೆ ರವಾನಿಸುವ ಕಾರ್ಯ ಭರದಿಂದ ಸಾಗಿದೆ.

 

 

Share this page : 
 

More News From : Agriculture & Environment

ವರುಣನ ಆರ್ಭಟಕ್ಕೆ ತತ್ತರಿಸಿದ ಜನತೆ;ಏಳು ಜನರು ಸಾವು ಇನ್ನೂ ಎರಡುದಿನ ಕಾಲ ಭಾರೀ ಮಳೆ ಎಚ್ಚರಿಕೆ
 • ವರುಣನ ಆರ್ಭಟಕ್ಕೆ ತತ್ತರಿಸಿದ ಜನತೆ;ಏಳು ಜನರು ಸಾವು ಇನ್ನೂ ಎರಡುದಿನ ಕಾಲ ಭಾರೀ ಮಳೆ ಎಚ್ಚರಿಕೆ
 • ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಸುರಿದ ಭಾರಿ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಅಮಳೆ ಅವಾಂತರಗಳಿಂದ ಸಂಭವಿಸಿದ ಅನಾಹುತಗಳಲ್ಲಿ ಏಳು ಜನರು ನೀರುಪಾಲಾಗಿದ್ದಾರೆ.
 • ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಬಿಹಾರ, ಒಡಿಶಾದಲ್ಲಿ ಚಂಡಮಾರುತ
 • ವರುಣನ ಅರ್ಭಟಕ್ಕೆ 8 ಜನರು ಬಲಿ: ಮೃತರ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ಪರಿಹಾರ
 • The Ultimate Job Portal
  Netzume - Resume Website Gou Products

  Other News

  © bangalorewaves. All rights reserved. Developed And Managed by Rishi Systems P. Limited