ಢಾಕಾ : ಬಾಂಗ್ಲಾದ ರಾಜಧಾನಿ ಢಾಕಾದ ಹೋಲಿ ಆರ್ಟಿಸನ್ ರೆಸ್ಟೋರೆಂಟ್ ಮೇಲೆ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ವಿದೇಶಿಯರೇ ಹೆಚ್ಚಾಗಿ ಉಳಿದುಕೊಳ್ಳುವ ಹೋಲಿ ಆರ್ಟಿಸನ್ ರೆಸ್ಟೋರೆಂಟ್ ಮೇಲೆ ದಾಳಿ ಮಾಡಿರುವ ಉಗ್ರರು 35ಕ್ಕೂ ಹೆಚ್ಚು ಮಂದಿಯನ್ನು ಒತ್ತೆಯಾಳುಗಳನ್ನಾಗಿ ಇರಿಸಿಕೊಂಡಿದ್ದಾರೆ. ಉಗ್ರರ ದಾಳಿ ಹಿನ್ನೆಲೆಯಲ್ಲಿ ರೆಸ್ಟೋರೆಂಟ್ ಸುತ್ತುವರೆದಿರುವ ಬಾಂಗ್ಲಾದೇಶ ಭದ್ರತಾ ಪಡೆ ಉಗ್ರರ ಧಮನಕ್ಕೆ ಕಾರ್ಯಾಚರಣೆ ಮುಂದುವರೆಸಿದ್ದಾರೆ.
ಉಗ್ರರು ಮತ್ತು ಭದ್ರತಾ ಪಡೆಗಳ ನಡುವಿನ ಗುಂಡಿನ ಘರ್ಷಣೆಯಲ್ಲಿ ಅಧಿಕಾರಿಗಳು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ರಾತ್ರಿಯಿಂದ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸುತ್ತಿತ್ತು.
ಕಾರ್ಯಾಚರಣೆ ವೇಳೆ ಇಬ್ಬರು ಬಾಂಗ್ಲಾದೇಶಿಗರನ್ನು ರಕ್ಷಿಸಲಾಗಿದೆ ಎಂದು ತಿಳಿದುಬಂದಿದೆ.