Untitled Document
Sign Up | Login    
Dynamic website and Portals
  
July 2, 2016

ಢಾಕಾದಲ್ಲಿ ಉಗ್ರರ ವಿರುದ್ಧದ ಕಮಾಂಡೋ ಕಾರ್ಯಾಚರಣೆ ಅಂತ್ಯ

ಢಾಕಾ : ಢಾಕಾದ ಹೋಲಿ ಆರ್ಟಿಸನ್ ರೆಸ್ಟೋರೆಂಟ್ ಮೇಲೆ ಉಗ್ರರು ದಾಳಿ ನಡೆಸಿ, ಒತ್ತೆಯಾಳುಗಳನ್ನಾಗಿ ಇರಿಸಿಕೊಂಡವರನ್ನು ವಿಮೋಚನೆಗೊಳಿಸುವಲ್ಲಿ ಬಾಂಗ್ಲಾ ಭದ್ರತಾ ಪಡೆ ಯಶಸ್ವಿಯಾಗಿದೆ.

ಕಳೆದ ರಾತ್ರಿ 9 ಗಂಟೆ ಸುಮಾರಿಗೆ ಶಸ್ತ್ರಸಜ್ಜಿತ ಬಂದೂಕುಧಾರಿ ಐಸಿಸ್ ಉಗ್ರರು ರೆಸ್ಟೋರೆಂಟ್ ಮೇಲೆ ದಾಳಿ ಮಾಡಿ 20ಕ್ಕೂ ಹೆಚ್ಚು ವಿದೇಶಿಗರನ್ನು ಒತ್ತೆಯಾಳಾಗಿ ಇಟ್ಟುಕೊಂಡಿದ್ದರು. ಘಟನೆ ಹಿನ್ನಲೆಯಲ್ಲಿ ಬಾಂಗ್ಲಾದೇಶದ ಶಸ್ತ್ರ ಸಜ್ಜಿತ ಕಮಾಂಡೋಗಳು ಭಾರೀ ಕಾರ್ಯಾಚರಣೆ ನಡೆಸಿ, ಒತ್ತೆಯಾಳುಗಳನ್ನು ವಿಮೋಚನೆಗೊಳಿಸಿದ್ದಾರೆ. ಇದರೊಂದಿಗೆ ಉಗ್ರರ ವಿರುದ್ಧ ಕಾರ್ಯಾಚರಣೆ ಮುಕ್ತಾಯಗೊಂಡಿದೆ ಎಂದು ತಿಳಿದು ಬಂದಿದೆ.

ಬಾಂಗ್ಲಾ ಪೊಲೀಸರ ಸಮೇತ 100 ಕ್ಕೂ ಹೆಚ್ಚು ಕಮಾಂಡೋಗಳು ಸ್ಥಳವನ್ನು ಸುತ್ತುವರೆದು ನಡೆಸಿದ ಕಾರ್ಯಾಚರಣೆಯಲ್ಲಿ 5 ಉಗ್ರರನ್ನು ಹತ್ಯೆಗೈದು ಇಬ್ಬರನ್ನು ಸೆರೆಹಿಡಿದಿದ್ದಾರೆ. ಇಬ್ಬರು ಉಗ್ರರು ತಪ್ಪಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದ್ದು, ಅವರ ಬಂಧನಕ್ಕೆ ಯೋಧರು ಶೋಧ ಕಾರ್ಯ ಆರಂಭಿಸಿದ್ದಾರೆ.

ಕಳೆದ ರಾತ್ರಿಯಿಂದ ಕಾರ್ಯಾಚರಣೆಗಿಳಿದಿದ್ದ ಭದ್ರತಾ ಪಡೆ ಯೋಧರು ಸತತ 14 ಗಂಟೆಗಳ ನಂತರ ಕಾರ್ಯಾಚರಣೆ ಅಂತ್ಯಗೊಳಿಸಿದ್ದಾರೆ. ಕಾರ್ಯಾಚರಣೆ ವೇಳೆ ರೆಸ್ಟೋರೆಂಟ್ ನಲ್ಲಿ 5 ಮೃತದೇಹಗಳು ಪತ್ತೆಯಾಗಿದ್ದು. ಅವರ ಗುರುತು ಪತ್ತೆಯಾಗಿಲ್ಲ. ವಿಮೋಚನೆಗೊಂಡಿರುವ 13 ಒತ್ತೆಯಾಳುಗಳ ಪೈಕಿ ಇಬ್ಬರು ವಿದೇಶಿ ಪ್ರಜೆಗಳಾಗಿದ್ದಾರೆ. ಇಬ್ಬರು ಬಾಂಗ್ಲಾ ಪೊಲೀಸರು ಉಗ್ರರಿಂದ ಹತರಾಗಿರುವುದಾಗಿ ತಿಳಿದುಬಂದಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : General

ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಮೂರನೇ ಜಲಾಂತರ್ಗಾಮಿ ನೌಕೆ ಪ್ರಾಜೆಕ್ಟ್‌ 28ರ ಅಡಿಯಲ್ಲಿ ನಿರ್ಮಾಣಗೊಂಡ ಐಎನ್‌ಎಸ್‌ ಕಿಲ್ತಾನ್‌ ನೌಕೆಯನ್ನು ವಿಶಾಖಪಟ್ಟಣದ ನೌಕಾ ನೆಲೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಾರ್ಪಣೆ ಮಾಡಿದರು.
  • ಆರುಷಿ ಹತ್ಯೆ ಪ್ರಕರಣ: ತಲ್ವಾರ್ ದಂಪತಿಗಳು ಖುಲಾಸೆ;ಅಲಹಾಬಾದ್ ಹೈಕೋರ್ಟ್ ತೀರ್ಪು
  • ಅ.12ರ ಮಧ್ಯ ರಾತ್ರಿಯಿಂದ ಪೆಟ್ರೋಲ್ ಬಂಕ್ ಬಂದ್
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited