ಪ್ರಿಟೋರಿಯಾ : ಆಫ್ರಿಕಾದ ನಾಲ್ಕು ರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಮೊಜಾಂಬಿಕ್ನಿಂದ ದಕ್ಷಿಣ ಆಫ್ರಿಕಾಕ್ಕೆ ಪ್ರಯಾಣ ಬೆಳೆಸಿದ್ದಾರೆ. ಆರ್ಥಿಕ ಕ್ಷೇತ್ರಗಳಲ್ಲಿನ ಪ್ರಗತಿಗೆ ಸಂಬಂಧಿಸಿದಂತೆ ಮಾತುಕತೆ ನಡೆಸಲಿದ್ದಾರೆ.
ಈಗಾಗಲೇ ಪ್ರಧಾನಿ ಮೋದಿ ಅವರು ದಕ್ಷಿಣ ಆಫ್ರಿಕಾದ ಪ್ರಿಟೋರಿಯಾಕ್ಕೆ ತಲುಪಿದ್ದಾರೆ. ಅಲ್ಲಿನ ವಿದೇಶಾಂಗ ಸಚಿವ ಕೊವಾನಾ ಮಾಶಾಬನೆ ಹಾಗೂ ಸಣ್ಣ ಕೈಗಾರಿಕೋದ್ಯಮ ಖಾತೆ ಸಚಿವೆ ಲಿಂಡಿವೆ ಜುಲು ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಅವರನ್ನು ಅದ್ದೂರಿಯಾಗಿ ಸ್ವಾಗತಿಸಿದರು.
ಮೋದಿ ಅವರು ದಕ್ಷಿಣ ಆಫ್ರಿಕಾದ ಅಧ್ಯಕ್ಷ ಜಾಕೋಬ್ ಜುಮಾ ಮತ್ತು ಉಪಾಧ್ಯಕ್ಷ ಸಿರಿಲ್ ರಮಾಪೊಸಾ ಜತೆ ಮಾತುಕತೆ ನಡೆಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ವಿಕಾಸ್ ಸ್ವರೂಪ್ ತಿಳಿಸಿದ್ದಾರೆ.
ಆರ್ಥಿಕ ಪ್ರಗತಿಗೆ ಸಂಬಂಧಿಸಿದಂತೆ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಮಾತುಕತೆ ನಡೆಯಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.