Untitled Document
Sign Up | Login    
Dynamic website and Portals
  
July 12, 2016

ಉನ್ನತಮಟ್ಟದ ಸಭೆ ಮುಕ್ತಾಯ: ಕಾಶ್ಮೀರದಲ್ಲಿ ಶಾಂತಿ ಕಾಪಾಡುವಂತೆ ಪ್ರಧಾನಿ ಮೋದಿ ಮನವಿ

ಉನ್ನತಮಟ್ಟದ ಸಭೆ ಮುಕ್ತಾಯ: ಕಾಶ್ಮೀರದಲ್ಲಿ ಶಾಂತಿ ಕಾಪಾಡುವಂತೆ ಪ್ರಧಾನಿ ಮೋದಿ ಮನವಿ

ನವದೆಹಲಿ : ಕಾಶ್ಮೀರದಲ್ಲಿ ಶಾಂತಿ-ಸೌಹಾರ್ದತೆ ಕಾಪಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ನಾಗರಿಕರಲ್ಲಿ ಮನವಿ ಮಾಡಿದ್ದಾರೆ.

ಬುರ್ಹಾನ್ ವಲಿ ಹತ್ಯೆಯ ಬಳಿಕ ಬಳಿಕ ಕಾಶ್ಮೀರದಲ್ಲಿ ಭುಗಿಲೆದ್ದಿರುವ ಹಿಂಸೆಗೆ 30 ಜನ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಹಿನ್ನೆಲೆಯಲ್ಲಿ, ಪರಿಸ್ಥಿತಿ ನಿಭಾಯಿಸಲು ರಾಜ್ಯ ಸರ್ಕಾರಕ್ಕೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಪ್ರಧಾನಿ ಮೋದಿ ಭರವಸೆ ನೀದಿದ್ದಾರೆ.

ನವದೆಹಲಿಯಲ್ಲಿ ಪ್ರಧಾನಿ ನೇತೃತ್ವದಲ್ಲಿ ಜಮ್ಮು ಮತ್ತು ಕಾಶ್ಮೀರ ರಾಜ್ಯದ ಕಾನೂನು ಸುವ್ಯವಸ್ಥೆ ಪರಿಸ್ಥಿತಿ ಬಗ್ಗೆ ಉನ್ನತ ಮಟ್ಟದ ಸಭೆ ನಡೆಯಿತು.ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಧಾನ ಮಂತ್ರಿಯವರ ಕಚೇರಿಯ ರಾಜ್ಯ ಸಚಿವ ಜಿತೇಂದ್ರ ಸಿಂಗ್, ಕಣಿವೆಯ ಪರಿಸ್ಥಿತಿಯ ಆವಲೋಕನ ನಡೆಸಿದ್ದಾರೆ. ಕಾಶ್ಮೀರದಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಲು ಜಮ್ಮು ಮತ್ತು ಕಾಶ್ಮೀರದಲ್ಲಿ ನಾಗರಿಕರು ಶಾಂತಿ ಮತ್ತು ಸೌಹಾರ್ದತೆ ಕಾಪಾಡುವಂತೆ ಪ್ರಧಾನಿ ಮನವಿ ಮಾಡಿದ್ದಾರೆ ಎಂದು ತಿಳಿಸಿದರು.

ಮುಗ್ಧ ಜನರ ಬದುಕಿಗೆ ತೊಂದರೆ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ. ಪರಿಸ್ಥಿತಿ ನಿಭಾಯಿಸುವ ಸಂಬಂಧ ಮಾರ್ಗದರ್ಶನ ನೀಡಿದರು ಎಂದು ಜಿತೇಂದ್ರ ಸಿಂಗ್ ತಿಳಿಸಿದ್ದಾರೆ.

ಈ ಸಭೆಯಲ್ಲಿ ಗೃಹ ಸಚಿವ ರಾಜನಾಥ್ ಸಿಂಗ್, ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ವಿತ್ತ ಸಚಿವ ಅರುಣ್ ಜೇಟ್ಲಿ, ಭದ್ರತಾ ಸಚಿವ ಮನೋಹರ್ ಪರ್ರಿಕರ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಹಿರಿಯ ಭದ್ರತಾ ಅಧಿಕಾರಿಗಳು ಭಾಗವಹಿಸಿದ್ದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited