Untitled Document
Sign Up | Login    
Dynamic website and Portals
  
July 14, 2016

ಕೆ.ಜೆ.ಜಾರ್ಜ್ ರಾಜೀನಾಮೆ ಸಿಎಂ ವಿವೇಚನೆಗೆ ಬಿಟ್ಟಿದ್ದು: ಸೋನಿಯಾ ಗಾಂಧಿ

ನವದೆಹಲಿ : ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ಅವರ ರಾಜಿನಾಮೆ ಪಡೆಯುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿವೇಚನೆಗೆ ಬಿಟ್ಟಿದ್ದು ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತಿಳಿಸಿದ್ದಾರೆ.

ಜಾರ್ಜ್ ಅವರ ರಾಜಿನಾಮೆ ನಿರ್ಧಾರ ಕೈಗೊಳ್ಳಲು ಸಿದ್ದರಾಮಯ್ಯ ಸ್ವತಂತ್ರರಾಗಿದ್ದು, ಆ ಬಗ್ಗೆ ಅವರ ನಿರ್ಧಾರ ಅಂತಿಮ ಎಂದು ಸೋನಿಯಾ ಹೇಳಿರುವುದಾಗಿ ತಿಳಿದುಬಂದಿದೆ.

ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಎಂ ಸಿದ್ದರಾಮಯ್ಯ ನಿನ್ನೆ ನ್ಯಾಯಾಂಗ ತನಿಖೆಗೆ ವಹಿಸಿದ್ದರು. ಆದರೆ ವಿಪಕ್ಷಗಳು ಜಾರ್ಜ್ ರಾಜಿನಾಮೆಗೆ ಪಟ್ಟು ಹಿಡಿದು ಸದನದ ಒಳಗೂ, ಹೊರಗೂ ಪ್ರತಿಭಟನೆ ನಡೆಸುತ್ತಿವೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited