Untitled Document
Sign Up | Login    
Dynamic website and Portals
  
July 15, 2016

ಫ್ರಾನ್ಸ್ ನಲ್ಲಿ ಉಗ್ರರ ದಾಳಿ: 80ಕ್ಕೂ ಹೆಚ್ಚು ಜನರು ಸಾವು

ನೈಸ್ : ಫ್ರಾನ್ಸ್ ನಲ್ಲಿ ಬ್ಯಾಸ್ಟೀಲ್ ಡೇ ಆಚರಿಸುತ್ತಿರುವ ಸಂದರ್ಭದಲ್ಲಿ ಫ್ರಾನ್ಸ್​ನ ನೈಸ್ ನಗರದಲ್ಲಿ ಉಗ್ರರ ದಾಳಿ ನಡೆದಿದ್ದು, ಘಟನೆಯಲ್ಲಿ 80ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ರಾಷ್ಟ್ರೀಯ ದಿನಾಚರಣೆ ಬ್ಯಾಸ್ಟೀಲ್ ಡೇ ಸಂಭ್ರಮಾಚರಣೆ ವೇಳೆ ನೀಸ್ ನಗರದ ಬೀಚ್ ರೆಸಾರ್ಟ್ ರಿವೀರಾನಲ್ಲಿ ಸಿಡಿಮದ್ದು ಪ್ರದರ್ಶನದ ವೇಳೆ ಉಗ್ರಗಾಮಿ ಚಾಲಕನೋರ್ವ ಭಾರಿ ಗಾತ್ರ ಸ್ಫೋಟಕ ತುಂಬಿದ ಟ್ರಕ್ ಅನ್ನು ಜನರ ಮೇಲೆ ಹರಿಸಿದ್ದಾನೆ. ಪರಿಣಾಮ ಸ್ಥಳದಲ್ಲಿಯೇ 80 ಮಂದಿ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಇನ್ನು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಿಂದ ಟ್ರಕ್ ಚಾಲಕ ಹತನಾಗಿದ್ದಾನೆ. ಉಗ್ರ ಟ್ಯೂನೀಸಿಯಾ ಮೂಲದವನು ಎಂದು ತಿಳಿದು ಬಂದಿದೆ.

ಈ ನಡುವೆ ಪ್ಯಾರೀಸ್ ದಾಳಿಯ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಉಗ್ರಗಾಮಿ ಸಂಘಟನೆ ಐಸಿಸ್ ಹೊತ್ತಿದ್ದು, ಹೋರಾಟದಲ್ಲಿ ಸತ್ತ ಯೋಧ ತನ್ನ ಪಡೆಯವನೇ ಎಂದು ತನ್ನ ವೆಬ್ ಸೈಟಿನಲ್ಲಿ ಹೇಳಿಕೊಂಡಿದೆ. ಅಲ್ಲದೆ ಇಂತಹ ಹಲವು ದಾಳಿಗಳನ್ನು ಸಂಘಟಿಸುವುದಾಗಿ ಎಚ್ಚರಿಕೆ ನೀಡಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Crime

ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಬೆಂಗಳೂರಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
  • ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿದ ಎಸ್ ಐ ಟಿ
  • ಸೈನೈಡ್ ಮೋಹನ್ ಗೆ ಜೀವಾವಧಿ ಜೈಲು ಶಿಕ್ಷೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited