Untitled Document
Sign Up | Login    
Dynamic website and Portals
  
July 15, 2016

ಫ್ರಾನ್ಸ್ ನಲ್ಲಿ ಉಗ್ರರ ದಾಳಿ: ಪ್ರಧಾನಿ, ರಾಷ್ಟ್ರಪತಿ ಖಂಡನೆ

ಫ್ರಾನ್ಸ್ ನಲ್ಲಿ ಉಗ್ರರ ದಾಳಿ: ಪ್ರಧಾನಿ, ರಾಷ್ಟ್ರಪತಿ ಖಂಡನೆ

ನವದೆಹಲಿ : ಫ್ರಾನ್ಸ್​ನ ನೈಸ್ ನಗರದಲ್ಲಿ ನಡೆದ ಉಗ್ರರ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ಬಲವಾಗಿ ಖಂಡಿಸಿದ್ದಾರೆ, ಫ್ರೆಂಚ್ ಸಹೋದರ-ಸಹೋದರಿಯರ ಜತೆಗೆ ಭಾರತವಿದೆ ಎಂಬ ಭರವಸೆ ನೀಡಿದ್ದಾರೆ.

ಫ್ರಾನ್ಸ್ ನ ರಾಷ್ಟ್ರೀಯ ದಿನಾಚರಣೆ ಬ್ಯಾಸ್ಟೀಲ್ ಡೇ ಆಚರಣೆ ಸಂದರ್ಭದಲ್ಲಿ ನಡೆದ ಉಗ್ರರ ದಾಳಿಯಿಂದ 80ಕ್ಕೂ ಅಧಿಕ ಸಾವು ಸಂಭವಿಸಿದ್ದು, 100ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಈ ವಿಚಾರವಾಗಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಮೃತ ಕುಟುಂಬಗಳಿಗೆ ಸಾಂತ್ವಾನದ ಮಾತುಗಳನ್ನಾಡಿದ್ದು, ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

ಘಟನೆಯ ಬಗ್ಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪ್ರತಿಕ್ರಿಯಿಸಿದ್ದು, ಖಂಡನೆ ವ್ಯಕ್ತಪಡಿಸಿದ್ದಾರೆ. ಫ್ರಾನ್ಸ್ ಜನತೆಯ ಬುಜಕ್ಕೆ ಬುಜ ನೀಡಿ ಭಾರತನಿಲ್ಲಲಿದೆ. ಈ ನಿಟ್ಟಿನಲ್ಲಿ ಭಾರತ ಸರ್ಕಾರ ಫ್ರಾನ್ಸ್​ಗೆ ಎಲ್ಲಾ ರೀತಿಯ ಸಹಕಾರ ನೀಡಲಿದೆ ಎಂದು ತಿಳಿಸಿದ್ದಾರೆ.

ಅಮೆರಿಕ ಅಧ್ಯಕ್ಷ ಒಬಾಮ, ಡೊನಾಲ್ಡ್ ಟ್ರಂಪ್, ಹಿಲರಿ ಕ್ಲಿಂಟನ್ ಸೇರಿದಂತೆ ವಿಶ್ವದ ನಾಯಕರು ಘಟನೆ ಖಂಡಿಸಿ, ಸಂತಾಪ ಸೂಚಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited